Old Pension Scheme: NPS ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆಯೇ ಜಾರಿ, ಕೊಟ್ಟ ಮಾತಿಗೆ ಕಾಂಗ್ರೆಸ್ ತಪ್ಪದು – ಸಚಿವ ಎಸ್.ಎಸ್. ಮಲ್ಲಿಕಾರ್ಜುನ!

Minister Mallikarjuna says old pension scheme for NPS EMPLOYEES

Old Pension Scheme : ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (Pension Scheme) ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತವನ್ನು ಪಡೆಯಬಹುದಾಗಿದೆ.

ಕೇಂದ್ರ ಮತ್ತು ರಾಜ್ಯಗಳಲ್ಲಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ (Old Pension Scheme) ಯೋಜನೆಯನ್ನು 2004ರಲ್ಲಿ ನಿಲ್ಲಿಸಿ, ಹೊಸ ಪಿಂಚಣಿ ವ್ಯವಸ್ಥೆಯನ್ನು ಪರಿಚಯಿಸಲಾಯಿತು. ಈ ಹಿನ್ನೆಲೆ ಕಳೆದ ಹಲವು ಸಮಯಗಳಿಂದ ಎನ್‌ಪಿಎಸ್‌ (NPS) ರದ್ದುಗೊಳಿಸಿ, ಒಪಿಎಸ್‌ (OPS) ಜಾರಿಗೊಳಿಸಬೇಕು ಎಂದು ದೇಶಾದ್ಯಂತ ನೌಕರರಿಂದ (employees) ಒತ್ತಾಯ ಕೇಳಿ ಬರುತ್ತಿದೆ. ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಎನ್.ಪಿ.ಎಸ್. ನೌಕರರು ರಾಜ್ಯದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದಾರೆ. ಕೆಲ ರಾಜ್ಯಗಳು ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ.

ಇದೀಗ ಹಳೆ ಪಿಂಚಣಿ ಜಾರಿಯ ಬಗ್ಗೆ ಮಾತನಾಡಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಹಳೆ ಪಿಂಚಣಿ ಜಾರಿ ಮಾಡುವುದಾಗಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.

ಈಗಾಗಲೇ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದವು. NPS ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಹೊಸ ಪಿಂಚಣಿ ರದ್ದುಗೊಳಿಸಿ, ಹಳೆ ಪಿಂಚಣಿ ಜಾರಿಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Government scheme: ರೈತರಿಗೆ 10,000 ರೂಪಾಯಿ ನೀಡಲಿದೆ ಈ ಹೊಸ ಯೋಜನೆ, ತಕ್ಷಣ ಇದರ ಲಾಭ ಪಡೆದುಕೊಳ್ಳಿ !

Leave A Reply

Your email address will not be published.