

Sakshi Malik: ಪ್ರತಿಭಟನಾ ನಿರತ ಕುಸ್ತಿಪಟುಗಳ ಜತೆ ಇದ್ದ ಕುಸ್ತಿತಾರೆ ಸಾಕ್ಷಿ ಮಲಿಕ್ (Sakshi Malik) ಸೋಮವಾರ ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಅವರು ಉತ್ತರ ರೈಲ್ವೆಯಲ್ಲಿ ತನ್ನ ಹುದ್ದೆಗೆ ಮರಳಿ ಸೇರಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ಇದೀಗ ವೈರಲ್ ಆದ ಸುದ್ದಿಗೆ ಪ್ರತಿಕ್ರಿಯಿಸಿದ ಸಾಕ್ಷಿ ಮಲಿಕ್ ‘ ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ಎಲ್ಲವೂ ಸುಳ್ಳು ಸುದ್ದಿ’ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಾಕ್ಷಿ ಮಲ್ಲಿಕ್ ಅವರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಜೊತೆಗೆ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕೂಡ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಪ್ರತಿಭಟನೆಯ ಬಗ್ಗೆ ಸಾಕ್ಷಿ ಮಲಿಕ್ ಟ್ವೀಟ್ ಮಾಡಿದ್ದು, “ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ಹುದ್ದೆಗೆ ಮರಳಿ ಸೇರಿಕೊಂಡಿಲ್ಲ. ಇದು ಸುಳ್ಳು ಸುದ್ದಿ” ಎಂದು ತಿಳಿಸಿದ್ದಾರೆ.
ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಕಿರುಕುಳದ ಆರೋಪ ಮಾಡಿದ್ದು, ಅವರನ್ನು ಕೂಡಲೇ ಬಂದಿಸುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು.
ಈ ಮಧ್ಯೆ ಕುಸ್ತಿಪಟುಗಳು ಶನಿವಾರ ಸಂಜೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಶನಿವಾರ ತಡರಾತ್ರಿ ದಿಲ್ಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಕುಸ್ತಿಪಟುಗಳು ಬ್ರಿಜ್ ಭೂಷಣ್ ಅವರ ಬಂಧನಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ
ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ ನೀಡಿದ್ದು, ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿದೆ ಅಮಿತ್ ಶಾ ಕುಸ್ತಿಪಟುಗಳಿಗೆ ಹೇಳಿದ್ದಾರೆ.
https://twitter.com/SakshiMalik/status/1665645066105544705?s=20
ಇದನ್ನು ಓದಿ: Congress: ಜುಲೈ 3ರಿಂದ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ













