Ex CM Yeddyurappa: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಬಿಗ್ ರಿಲೀಫ್, ಡಿ ನೋಟಿಫಿಕೇಶನ್ ರದ್ದು ಮಾಡಿ ಹೈ ಕೋರ್ಟ್ ಆದೇಶ

Big relief to ex CM Yeddyurappa high court order canceling de-notification

Ex CM Yeddyurappa: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದ್ದ ಡಿನೋಟಿಫಿಕೇಷನ್‌ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿ ಆದೇಶಹೊರಡಿಸಿದೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (Ex CM Yeddyurappa) ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ, ಸುಮಾರು ಎಂಟು ವರ್ಷದ ಹಿಂದೆ ಡಿನೋಟಿಫಿಕೇಷನ್ ಹಗರಣ ಮಾಡಲಾಗಿದೆ ಎಂದು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ದೂರು ಲೋಕಾಯುಕ್ತದಲ್ಲಿ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಾಕಷ್ಟು ವಿಚಾರಣೆಗಳನ್ನು ಎದುರಿಸಿದ್ದರು.

ಬಿಎಸ್‌ ಯಡಿಯೂರಪ್ಪ ಅವರು ತಮ್ಮ ಮುಖ್ಯಮಂತ್ರಿಯ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎನ್ನುವುದು ದೂರು. ದೂರುದಾರರು ಅಕ್ರಮ ಡಿನೋಟಿಫಿಕೇಷನ್ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದರು. 2015 ರಲ್ಲಿ ಈ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತವು ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಲೋಕಾಯುಕ್ತದಲ್ಲಿ ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈಗ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್ ನಲ್ಲಿ ವಜಾ ಆದೇಶ ಬಂದಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದಿಂದ ಆದೇಶ ಹೊರಡಿಸಲಾಗಿದೆ. ಈ ಕೇಸಿನ ಇದರಿಂದಾಗಿ ಕಳೆದ 8 ವರ್ಷದ ಹಿಂದಿನ ಪ್ರಕರಣದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಕೆ.ಎಸ್. ಈಶ್ವರಪ್ಪಗೆ ಜೂನ್ 30 ನಿರ್ಣಾಯಕ:
ಶಿವಮೊಗ್ಗದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಚಿವ ಈಶ್ವರಪ್ಪ ಅವರ ಮೇಲೆ ಆರೋಪ ಕೇಳಿಬಂದಿತ್ತು. ಆದರೆ, ರಾಜ್ಯ ಪೊಲೀಸರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಆದರೆ, ಈಗ ಬಿ ರಿಪೋರ್ಟ್‌ ಪ್ರಶ್ನಿಸಿ ಅರ್ಜಿಯ ತೀರ್ಪು ಜೂನ್ 30 ರಂದು ಪ್ರಕಟ ಆಗಲಿದ್ದು, ಜೂನ್ 30 ರಂದು ಈಶ್ವರಪ್ಪ ಅವರಿಗೆ ನಿರ್ಣಾಯಕ ದಿನವಾಗಲಿದೆ.

 

ಇದನ್ನು ಓದಿ: Heart attack: ಯುವ ಹೃದಯ ರೋಗ ತಜ್ಞನಿಗೇ ಹೃದಯಾಘಾತ, 16,000 ಹೃದ್ರೋಗಿಗಳ ಶಸ್ತ್ರ ಚಿಕಿತ್ಸಕ ಗೌರವ್ ಗಾಂಧಿ ಇನ್ನಿಲ್ಲ 

Leave A Reply

Your email address will not be published.