ಗೃಹಲಕ್ಷ್ಮೀ ಯೋಜನೆಗಾಗಿ ಇತರ ಪಿಂಚಣಿಗಳನ್ನು ಕಡಿತ ಮಾಡಲ್ಲ : ಸಚಿವ ಕೃಷ್ಣ ಭೈರೇಗೌಡ
Gruha Lakshmi Scheme : ಕಾಂಗ್ರೆಸ್ (Congress ) ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ(Gruha Lakshmi Scheme)ಗಾಗಿ ಇತರ ಪಿಂಚಣಿಗಳನ್ನು ಕಡಿತ ಮಾಡಲ್ಲ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ (Revenue Minister Krishna Byre Gowda)ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆದ್ದು ಆಡಳಿತ ನಡೆಸಲು ಮುಂದಾಗ ಕಾಂಗ್ರೆಸ್ ಸರ್ಕಾರದಲ್ಲಿ ಇದೀಗ ಗ್ಯಾರಂಟಿಗಳದ್ದೇ ದರ್ಬಾರು ಶುರುವಾಗಿದೆ. ಅದರಲ್ಲೂ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆಯಡಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ದಾರ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ಈ ನಿಟ್ಟಿನಲ್ಲಿ ಕೆಲ ದಿನಗಳ ಹಿಂದೆ ಅರ್ಜಿ ನಮೂನೆ ಸಲ್ಲಿಸುವ ಮುನ್ನ ಜನರಿಗೆ ಮತ್ತೊಂದು ಭಯ ಕಾಡೋದಕ್ಕೆ ಶುರುವಾಗಿದ್ದು, ಮಹಿಳೆಯರಿಗೆ ಸಿಗುತ್ತಿದ್ದ ಇತರ ಪಿಂಚಣಿಗಳನ್ನು ಸರ್ಕಾರ ಕಡಿತಮಾಡಬಹುದು ಎಂಬ ಗೊಂದಲಕ್ಕೆ ಒಳಗಾಗಿ ಕೆಲ ಮಹಿಳಾ ಮಣಿಗಳು ಹಿಂದೇಟು ಹಾಕೋದಕ್ಕೆ ಮುಂದಾಗಿದ್ದಾರೆ.
ಈ ಗೊಂದಲದ ವಿಚಾರವಾಗಿ ಮಾಧ್ಯಮಗಳೊಂದಿಗೆ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಈಗಾಗಲೇ ವಿಧವೆಯರು, ವೃದ್ಧರು, ಸಂಧ್ಯಾ ಸುರಕ್ಷಾ, ಅಂಗವಿಕಲರು, ತೃತೀಯಲಿಂಗಿಗಳು ಸೇರಿ 78 ಲಕ್ಷ ಜನರಿಗೆ ಪ್ರತಿವರ್ಷ ಸರ್ಕಾರದಿಂದ ಪಿಂಚಣಿ ನೀಡಲಾಗುತ್ತಿದೆ ಇದರಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ. ಇನ್ಮುಂದೆ ಇತರ ಪಿಂಚಣಿಗಳನ್ನು ಕಡಿತ ಮಾಡದೇ, ಗೃಹಲಕ್ಷ್ಮೀ ಯೋಜನೆಯಡಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ದಾರ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುತ್ತೇವೆ ಎಂದು ಸ್ಪಷ್ಟನೆನೀಡಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮೀ ಮಾರ್ಗಸೂಚಿಯಲ್ಲಿ ಭಾರೀ ಬದಲಾವಣೆ