Basavaraj Bommai: ವಿದ್ಯುತ್ ಬಿಲ್ ನಾವು ಹೆಚ್ಚು ಮಾಡಿಲ್ಲ, ಸಚಿವ ಜಾರ್ಜ್ ಆರೋಪಕ್ಕೆ ಬೊಮ್ಮಾಯಿ ಪ್ರತ್ಯುತ್ತರ !
Basavaraj Bommai: ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಾವು ವಿದ್ಯುತ್ ದರ ಏರಿಸಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲೇ ವಿದ್ಯುತ್ ದರ ಏರಿಕೆಯ ದಿನಾಂಕ ಗೊತ್ತುಪಡಿಸಲಾಗಿತ್ತು ಎಂದು ಹೇಳಿದ್ದರು. ಇದೀಗ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವಿದ್ಯುತ್ ದರ ಏರಿಕೆ ಮಾಡಿದೆ ಎಂದು ಬಿಜೆಪಿಯವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ, ನಾವು ವಿದ್ಯುತ್ ದರ ಏರಿಸಿಲ್ಲ. ಚುನಾವಣೆಗೂ ಮೊದಲೇ ವಿದ್ಯುತ್ ದರ ಏರಿಕೆಯ ದಿನಾಂಕ ಗೊತ್ತುಪಡಿಸಲಾಗಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲೇ ಮೇ 12 ರಿಂದ ವಿದ್ಯುತ್ ದರ ಏರಿಕೆ ಎಂದು ಏಪ್ರಿಲ್ ನಲ್ಲಿಯೇ ತೀರ್ಮಾನವಾಗಿತ್ತು. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಇದು ಜಾರಿಯಾಗಿರಲಿಲ್ಲ ಎಂದು ಹೇಳಿದ್ದರು.
ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ (KJ George), ಪ್ರಿಯಾಂಕ್ ಖರ್ಗೆ, ಡಾ ಜಿ ಪರಮೇಶ್ವರ್ ಕೂಡ ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿದ್ಯುತ್ ದರ ಏರಿಸಲಾಗಿತ್ತು ಎಂಬ ಹೇಳಿಕೆ ನೀಡಿದ್ದರು. ಇದೀಗ ಎಲ್ಲಾ ಕಾಂಗ್ರೆಸ್ ನಾಯಕರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ವಿದ್ಯುತ್ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿರಲಿಲ್ಲ. ಬದಲಾಗಿ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಕೆ ವರದಿಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ವಿದ್ಯುತ್ ದರ ಹೆಚ್ಚಳವಾಗಿದೆ. ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ ಬಂದ ಕಾರಣ
ಬಿತ್ತನೆ ತಡವಾಗಿದೆ. ಈ ವೇಳೆ ರಾಜ್ಯ ಸರ್ಕಾರ ರೈತರಿಗೆ ಬೆಂಬಲವಾಗಿ ನಿಂತಿಲ್ಲ. ಅಲ್ಲದೆ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇದಕ್ಕೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ :ಪತಿಗೇ ರಾಖಿ ಬಿಗಿದ ಮಹರಾಯ್ತಿ, ‘ಬಿಪರ್ ಜಾಯ್’ ಅಬ್ಬರಕ್ಕೆ 16ರ ಬಾಲಕ ಮೃತ್ಯು, ಪ್ರಧಾನಿಯಿಂದ 70,000 ಉದ್ಯೋಗ!