Udupi job fair: ಉಡುಪಿಯಲ್ಲಿ 15ರಂದು ಮಿನಿ ಉದ್ಯೋಗ ಮೇಳ

Karnataka job news Job fair organised in Udupi district on June 15

Udupi job fair: ಉಡುಪಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 15ರಂದು ಬೆಳಿಗ್ಗೆ 10.30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ (Udupi job fair) ನಡೆಯಲಿದೆ.

 

SSLC, PUC, ITI, BCom, BE ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ resume/CV ಹಾಗೂ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಸಂಪರ್ಕಿಸಬಹುದು.

ಇದನ್ನೂ ಓದಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

Leave A Reply

Your email address will not be published.