Congress: ಮತಾಂತರ ನಿಷೇಧ ಕಾಯ್ದೆ ರದ್ದು : ರಾಜ್ಯ ಸಚಿವ ಸಂಪುಟ ನಿರ್ಧಾರ

Karnataka latest congress government news Karnataka cabinet meeting decided to withdraw anti conversion law and APMC act

Karnataka cabinet meeting : 2023 ರಾಜ್ಯ ಚುನಾವಣೆ ನಂತರ, ಕಾಂಗ್ರೆಸ್ ಆಳ್ವಿಕೆಯಲ್ಲಿ ರಾಜ್ಯ ಸರ್ಕಾರ (Karnataka cabinet meeting) ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು(Congress Government) ಈ ಹಿಂದೆ ಬಿಜೆಪಿ ಸರ್ಕಾರದ(BJP Government) ಅವಧಿಯಲ್ಲಿ ಏನೆಲ್ಲಾ ಕಾನೂನು, ಯೋಜನೆಗಳನ್ನು ಜಾರಿಗೆ ತಂದಿತ್ತೋ ಅವುಗಳೆಲ್ಲವನ್ನೂ ಪರಿಶೀಲಿಸಿ, ರದ್ದುಗೊಳಿಸುವತ್ತ ತನ್ನ ಚಿತ್ತನೆಟ್ಟಿದೆ. ಅಂತೆಯೇ ಇದೀಗ ಬಿಜೆಪಿ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಸೇರಿದಂತೆ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.

ಹೌದು, ಬಿಜೆಪಿ ಅವಧಿಯಲ್ಲಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ(Cabinet meeting) ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್(H K patil) ಹೇಳಿದ್ದಾರೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ(Press meet) ನಡೆಸಿ ಮಾತನಾಡಿದ ಅವರು, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಧಾರ್ಮಿಕ ಸಂರಕ್ಷಣಾ ಅಧಿನಿಯಮ- 2022 ನ್ನು ರದ್ದುಗೊಳಿಸಿ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ವಿಧೇಯಕ- 2023ಕ್ಕೆ ಅನುಮೋದನೆ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು. 2022 ರಲ್ಲಿ ಬಿಜೆಪಿ ಸರ್ಕಾರ ಮಾಡಿದ್ದ ತಿದ್ದುಪಡಿಯನ್ನು ರದ್ದು ಮಾಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ತೆಗೆದುಕೊಂಡಿದ್ದೇವೆ. ಜುಲೈ ಅಧಿವೇಶನದಲ್ಲಿ ಹೊಸ ತಿದ್ದುಪಡಿಯೊಂದಿಗೆ ಮರು ಮಂಡನೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಲ್ಲದೆ ಮತಾಂತರಕ್ಕೆ ಬಲಿಯಾದವರಿಗೆ 5 ಲಕ್ಷ ರೂ. ವರೆಗೂ ಪರಿಹಾರ ಮತ್ತು ಇದನ್ನು ಪುನರಾವರ್ತಿಸಿದವರಿಗೆ 5 ವರ್ಷ ಜೈಲು 2 ಲಕ್ಷ ರೂ. ದಂಡ ಹಾಕಲಾಗುತ್ತಿತ್ತು. ಆದರೆ, ಇವುಗಳಲ್ಲಿ ಬದಲಾವಣೆ ತರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು ಮುಂಬರುವ ಅಧಿವೇಶನದಲ್ಲಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಈ ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು , ಆರ್‌ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಡೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನು ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ.

ಅಲ್ಲದೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದು ಕಡ್ಡಾಯ ಎಂದು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: Cat: ದಾರಿಯಲ್ಲಿ ಬೆಕ್ಕು ಅಡ್ಡಬಂದರೆ ನಿಜವಾಗಲೂ ಅಪಶಕುನವೇ! ಇದಕ್ಕೆ ಕಾರಣವೇನು ಗೊತ್ತಾ!

Leave A Reply

Your email address will not be published.