Biporjoy: ಬಿಪೊರ್ ಜಾಯ್ ಚಂಡಮಾರುತ ಪ್ರಭಾವ; ಕರಾವಳಿಯಲ್ಲಿ ಜೂ.19 ರವರೆಗೆ ಹೈ ಅಲರ್ಟ್!!!

Latest Karnataka weather news cyclone alert in Mangalore Bipor joy abra high alert declared in coastal area

Cyclone Biporjoy: ಬಿಪರ್​ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ ಎನ್ನುವ ಮಾಹಿತಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಚಂಡಮಾರುತಕ್ಕೆ ‘ಬಿಪರ್​ಜಾಯ್’ ಎನ್ನುವ ಹೆಸರನ್ನು ಬಾಂಗ್ಲಾದೇಶ ಇಟ್ಟಿದೆ. ಇದರ ಅರ್ಥ ‘ವಿಪತ್ತು’ ಎಂಬುದಾಗಿದೆ.

ಬಿಪೊರ್ ಜಾಯ್ ಚಂಡಮಾರುತದ (Cyclone Biporjoy) ಪ್ರಭಾವದಿಂದ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು ಜಿಲ್ಲೆಯ ಕರಾವಳಿ ಭಾಗದಲ್ಲಿ ಜೂನ್ 19ರ ವರೆಗೂ ಭಾರಿ ಗಾತ್ರದ ಅಲೆಗಳು ಅಪ್ಪಳಿಸುವದರಿಂದ ಕಡಲತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ತುರ್ತು ನಿರ್ವಹಣಾ ಕೇಂದ್ರವನ್ನು ತೆರೆಯಲಾಗಿದ್ದು, ಉತ್ತರ ಕನ್ನಡ ಜಿಲ್ಲಾ ಕಂಟ್ರೋಲ್ ರೂಮ್ 08382- 229857/1077 ಅಥವಾ ವಾಟ್ಸಾಪ್ ಸಂಖ್ಯೆ 9483511015 ಗೆ ತುರ್ತು ಸಂದರ್ಭದಲ್ಲಿ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಇನ್ನು ಭಾರತೀಯ ಹವಾಮಾನ ಇಲಾಖೆ ಕರಾವಳಿ ಭಾಗಕ್ಕೆ ಹೈ ವೇವ್ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ ಐದು ದಿನಗಳವರೆಗೆ ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರಲಿದ್ದು, ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಲಿದೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸೂಚನೆ ಆಧರಿಸಿ ಜಿಲ್ಲಾಡಳಿತ ಸೂಚಿಸಿದೆ.

ಇದನ್ನೂ ಓದಿ: Rakhi Sawant: ರಾಖಿ ಸಾವಂತ್ ಗೆ ಸಿಕ್ಕ ಮತ್ತೊಬ್ಬ ಹೊಸ ಬಾಯ್ ಫ್ರೆಂಡ್! ಈ ಬಾರಿ ಯಾರು?

Leave A Reply

Your email address will not be published.