KSRTC Staff Salary Hike: ಸಾರಿಗೆ ನೌಕರರಿಗೆ ಸಿಹಿಸುದ್ದಿ ; ಶೇ.15 ವೇತನ ಹೆಚ್ಚಳ !
Karnataka news Congress government news Good news for KSRTC staff 15 percent Salary increase
KSRTC Staff Salary Hike: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ನುಡಿದಂತೆ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಇವುಗಳ ಪೈಕಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ (ಶಕ್ತಿ ಯೋಜನೆಗೆ) (Free Bus Ticket) ಈಗಾಗಲೇ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ನಾರಿಮಣಿಯರು ಉಚಿತ ಪ್ರಯಾಣವನ್ನು ಸಂಭ್ರಮಿಸುತ್ತಿದ್ದಾರೆ.
ಸದ್ಯ ನಷ್ಟದಲ್ಲಿರುವ ರಾಜ್ಯ ಸಾರಿಗೆ ನಿಗಮಗಳಿಗೆ ಸರ್ಕಾರ ಗುಡ್’ನ್ಯೂಸ್ ನೀಡಿದೆ. ಗುರುವಾರ ಸಚಿವ ಸಂಪುಟ ಸಭೆಯಲ್ಲಿ
ಸಾರಿಗೆ ನಿಗಮಗಳ ಸಿಬ್ಬಂದಿ ವೇತನವನ್ನು ಶೇ.15 ರಷ್ಟು ಹೆಚ್ಚಿಸುವ ಪ್ರಸ್ತಾಪಕ್ಕೆ ಸಭೆ ಒಪ್ಪಿಗೆ ನೀಡಿದೆ. ಕಳೆದ ಮೂರು ವರ್ಷಗಳಿಂದಲೂ ಸಾರಿಗೆ ನೌಕರರು ವೇತನ ಹೆಚ್ಚಳ (KSRTC Staff Salary Hike) ಕುರಿತು ಹೋರಾಟ ನಡೆಸಿಕೊಂಡು ಬಂದಿದ್ದು, ಇದೀಗ ವೇತನ ಹೆಚ್ಚಳದ ಭರವಸೆ ಸಿಕ್ಕಿದೆ.
ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್ ಅವರು, “ಕಳೆದ ಮಾರ್ಚ್ 17ರಿಂದ ಪೂರ್ವಾನ್ವಯ ಆಗುವಂತೆ ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಶೇ.15ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ಜೊತೆಗೆ ಎಲ್ಲ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಿಗೆ ಮೋಟಾರು ವಾಹನ ತೆರಿಗೆ ವಿನಾಯಿತಿ ನೀಡಲಾಗಿದೆ. ಡಬಲ್ ಡೆಕ್ಕರ್ ವಿದ್ಯುತ್ ಚಾಲಿತ ಬಸ್ಸುಗಳ ಖರೀದಿಗೆ ಅನುಮೋದನೆ ನೀಡಲಾಗಿದೆ” ಎಂದು ಹೇಳಿದರು.
ಇದನ್ನೂ ಓದಿ: ಉಚಿತ ಬಸ್ ಬುಕ್ ಮಾಡಲು ಮಹಿಳೆಯರ ನೂಕುನುಗ್ಗಲು, KSRTC ಸರ್ವರ್ ಔಟ್ !