M B Patil-B L Santosh: ಬಿ ಎಲ್ ಸಂತೋಷರೇ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿಗೆ ಮೂಲ ಕಾರಣ ನೀವೆ, ನಿಮ್ಮ ಕೊಡುಗೆ ಅಪಾರ !! ಹೊಸ ಬಾಂಬ್ ಸಿಡಿಸಿದ ಸಚಿವ ಎಂ ಬಿ ಪಾಟೀಲ್ !!
Minister MB Patil made fun of BJP National Organizing General Secretary BL Santosh
M B Patil-B L Santosh: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ(Congress Government)ಬರಲು ತಮ್ಮ ಕೊಡುಗೆ ಅಪಾರ ಎನ್ನುವ ಮೂಲಕ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್(M B Patil-B L Santosh) ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್(B L Santosh) ಅವರ ಕಾಲೆಳೆದಿದ್ದಾರೆ.
ಹೌದು, ಈ ಬಾರಿಯ ವಿಧಾನಸಭೆಯ ಚುನಾವಣೆಯ(Assembly election) ಬಿಜೆಪಿ(BJP)ಯು ಹೀನಾಯವಾಗಿ ಸೋಲನುಭವಿಸಿಲು ಮೂಲ ಕಾರಣ ಬಿ ಎಲ್ ಸಂತೋಷ್ ಅವರು ಮೂಲ ಕಾರಣ. ಅನಗತ್ಯ ಮೂಗುತೂರಿಕೆಯೇ ನಾವು ಈ ಸ್ಥಿತಿಗೆ ಬರಲು ಕಾರಣ ಎಂದು ಸ್ವತಃ ಬಿಜೆಪಿ ನಾಯಕರೇ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ನಿಮ್ಮ ಕೊಡುಗೆ ಅಪಾರವಾಗಿದೆ. ಅದಕ್ಕಾಗಿ ನಾವು ನಿಮಗೆ ಆಭಾರಿ ಆಗಿರುತ್ತೇವೆ’ ಎನ್ನುವ ಮೂಲಕ ಬೃಹತ್ ಮತ್ತು ಮಧ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್(B L Santosh) ಅವರ ಕುರಿತು ವ್ಯಂಗ್ಯವಾಡಿದ್ದಾರೆ.
ಇಂದು ಟ್ವೀಟ್ ಮಾಡಿರುವ ಎಂ.ಬಿ. ಪಾಟೀಲ್, ‘ಬಿ.ಎಲ್. ಸಂತೋಷ್ರವರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ. ಇದೀಗ ಉಳಿದಿರುವ ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ(Ex CM Basavaraj bommai) ಅವರನ್ನು ಮುಗಿಸಲು ಅವರ ವಿರುದ್ಧ ಬಸವನಗೌಡ ಪಾಟೀಲ್ ಅವರನ್ನು ಎತ್ತಿ ಕಟ್ಟುವುದರ ಜೊತೆಗೆ ನಿಮ್ಮ ಕಟ್ಟಾ ಶಿಷ್ಯ ಪ್ರತಾಪ್ ಸಿಂಹ(Prathap simha) ಅವರ ಹೆಗಲ ಮೇಲೆ ಬಂದೂಕು ಇಟ್ಟು ಗುರಿನೆಟ್ಟಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ.
ಕರ್ನಾಟಕದ ಇತ್ತೀಚಿನ ರಾಜಕಾರಣವನ್ನು ಒಂದೇ ವಾಕ್ಯದಲ್ಲಿ ಹೇಳುವುದಾದರೆ, ವಿಶ್ವೇಶ್ವರ ಭಟ್ ಅವರು ಹೇಳಿರುವಂತೆ ‘ಅತಿಯಾದ ‘ಸಂತೋಷ’ವೇ ದುಃಖಕ್ಕೆ ಕಾರಣ’ ಎಂದು ವ್ಯಂಗ್ಯವಾಡಿರುವ ಎಂ.ಬಿ. ಪಾಟೀಲ್, ಲಿಂಗಾಯತರ ನಂತರ ನಿಮ್ಮ ಗುರಿ ಒಕ್ಕಲಿಗರಾ, ದಲಿತರಾ? ಎಂದು ಪ್ರಶ್ನಿಸುವ ಮೂಲಕ ಸಂತೋಷ್ ಅವರಿಗೆ ಚಾಟಿ ಬೀಸಿದ್ದಾರೆ.
.@blsanthosh ರವರೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ.ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ.
ಇದೀಗ ಉಳಿದಿರುವ, ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSBommai ಯವರನ್ನು ಮುಗಿಸಲು…
— M B Patil (@MBPatil) June 17, 2023