Rain Alert: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ !
Latest Karnataka weather updates Heavy rain in these districts of the Karnataka state in the next 48 hours
Rain Alert: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿಯೇ ಇದೆ. ಹಲವು ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದೀಗ ಹವಾಮಾನ ಇಲಾಖೆಯಿಂದ ಮುನ್ಸೂಚನೆ ದೊರೆತಿದ್ದು, ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿದ ಭಾಗಗಳಲ್ಲಿ ಭಾರಿ ಮಳೆಯಾಗುವ (Rain Alert) ಸಾಧ್ಯತೆ ಇದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ (dakshina Kannada), ಉಡುಪಿ (Udupi), ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ಧಾರವಾರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
ಅಲ್ಲದೆ, ಉಷ್ಣಾಂಶವು ಹೆಚ್ಚಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ (Bengaluru) ಹಗುರ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಿದ್ದರೆ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಿದೆ. ಹಾಗೂ 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಕೆಐಎಎಲ್ನಲ್ಲಿ ಗರಿಷ್ಠ ಉಷ್ಣಾಂಶ 30.6 ಡಿಗ್ರಿ ಸೆಲ್ಸಿಯಸ್ ಹಾಗೂ 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.
ಇದನ್ನೂ ಓದಿ: Indurikar Maharaj: ‘ ಸಮ ‘ ಮಾಡಿದರೆ ಗಂಡು ಮಗು, ಉಲ್ಟಾ ಮಾಡಿದರೆ ಹೆಣ್ಣು ಮಗುವಾಗತ್ತೆ ಎಂದ ಖ್ಯಾತ ಕೀರ್ತನೆಗಾರ !