Govt Job Recruitment: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ!

Direct recruitment for various vacancies in government organizations in the state of Karnataka

Share the Article

Govt Job Recruitment: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, (ಸಿ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, (ಡಿ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್‌ ಲಿಮಿಟೆಡ್‌ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ (Govt Job Recruitment) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ವಿವಿಧ ಸರ್ಕಾರಿ ಇಲಾಖೆ / ಸಂಸ್ಥೆಗಳಲ್ಲಿನ ನೇಮಕಾತಿಗೆ ಹುದ್ದೆವಾರು ಮತ್ತು ವರ್ಗವಾರು ವರ್ಗೀಕರಣ, ವಯೋಮಿತಿ, ಶೈಕ್ಷಣಿಕ ವಿದ್ಯಾರ್ಹತೆ, ಸರ್ಧಾತ್ಮಕ ಪರೀಕ್ಷೆಯ ವಿಧಾನ ಹಾಗೂ ನೇಮಕಾತಿಗೆ ಸಂಬಂಧಿಸಿದ ಇತರೆ ಎಲ್ಲಾ ಷರತ್ತುಗಳನ್ನೊಳಗೊಂಡಂತೆ ವಿವರವಾದ ಪ್ರಕಟಣೆಯನ್ನು ಪ್ರಾಧಿಕಾರದ ವೆಬ್‌ ಸೈಟಿನಲ್ಲಿ 23-06-2023 ರಂದು ಪ್ರಕಟಿಸಲಾಗುವುದು. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 23-06-2023ರ ಮಧ್ಯಾಹ್ನ ಸಮಯ 2 ರಿಂದ ಪ್ರಾರಂಭ
ಇ ಅಂಚೆ ಕಚೇರಿಗಳಲ್ಲಿ ಶುಲ್ಕ ಪಾವತಿ (ಕಚೇರಿಯ ವೇಳೆಯಲ್ಲಿ): 26-06-2023 ರ ಬೆಳಗ್ಗೆ 11.00 ರಿಂದ
ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-07-2023 ಸಂಜೆ 5.30 ರವರೆಗೆ
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ (ಕಚೇರಿಯ ವೇಳೆಯಲ್ಲಿ): 25-07-2023

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು: 26 ಹುದ್ದೆಗಳು

ಕರ್ನಾಟಕ ರಾಜ್ಯ ಆಹಾರ & ನಾಗರಿಕ ಸರಬರಾಜು ನಿಗಮದಲ್ಲಿ -386 ಹುದ್ದೆಗಳು

ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ: 186 ಹುದ್ದೆಗಳು

ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್ ನಲ್ಲಿ: 72 ಹುದ್ದೆಗಳು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್‌ ನೋಡಿ

 

Govt Job Recruitment

Govt Job Recruitment

ಇದನ್ನೂ ಓದಿ: ವಿದ್ಯುತ್‌ ದರ ಹೆಚ್ಚಳ ವಿರೋಧಿಸಿ ಇಂದು ಕರ್ನಾಟಕ ಬಂದ್‌! ಯಾವುದಿರುತ್ತೆ? ಯಾವುದಿರಲ್ಲ?

Leave A Reply