Rashmika Mandanna: ನಟಿ ರಶ್ಮಿಕಾ ಮಂದಣ್ಣ ದುಡಿದ 80 ಲಕ್ಷ ರೂ. ಕಬಳಿಸಿದ ಮ್ಯಾನೇಜರ್ ; ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಶ್ಮಿಕಾ ಏನಂದ್ರು ?!

kannada news cini news Actress Rashmika Mandanna and her manager responded and gave clarifications

Share the Article

Rashmika Mandanna: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಲವಾರು ವಿಚಾರಗಳಿಗೆ ಸುದ್ಧಿಯಾಗುತ್ತಲೇ ಇರುತ್ತಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರ
ಕೆಲಸಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ನಟಿಯ ಲಕ್ಷಾಂತರ ಹಣ ದೋಚಿದ್ದಾರೆ ಎಂಬ ವಿಚಾರ ವೈರಲ್ ಆಗಿತ್ತು. ಇದೀಗ ಈ ಬಗ್ಗೆ
ನಟಿ ರಶ್ಮಿಕಾ ಮತ್ತು ಅವರ ಮ್ಯಾನೇಜರ್ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ.

ನಟಿಯ ಬರೋಬ್ಬರಿ 80 ಲಕ್ಷ ರೂಪಾಯಿ ಹಣವನ್ನು ಮ್ಯಾನೇಜರ್ ಕಬಳಿಸಿದ್ದಾನೆ. ಹೀಗಾಗಿ ಮ್ಯಾನೇಜರ್‌ನನ್ನು ರಶ್ಮಿಕಾ ಕೆಲಸದಿಂದ ತೆಗೆದು ಹಾಕಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಆದರೆ, ಈ ಬಗ್ಗೆ ರಶ್ಮಿಕಾ ಮಂದಣ್ಣ ಯಾವುದೇ ಮಾಹಿತಿ ನೀಡಿರಲಿಲ್ಲ. ರಶ್ಮಿಕಾಳ‌ ಪ್ರತಿಕ್ರಿಯೆಗಾಗಿ ಅಭಿಮಾನಿಗಳಿಗೆ ಕಾದು ಕುಳಿತಿದ್ದರು. ಇದೀಗ ನಟಿ ಪ್ರತಿಕ್ರಿಯಿಸಿದ್ದಾರೆ.

image souce: Source: news 18

ಈ ಬಗ್ಗೆ ಪ್ರತಿಕ್ರಿಯಿಸಿದ ರಶ್ಮಿಕಾ ಮತ್ತು ಅವರ ಮ್ಯಾನೇಜರ್, ಪ್ರತ್ಯೇಕವಾಗಿ ಕೆಲಸ ಮಾಡುವ ತಮ್ಮ ನಿರ್ಧಾರದ ಹಿಂದೆ ಯಾವುದೇ ಸಂಘರ್ಷವಿಲ್ಲ ಎಂದು ಹೇಳಿದ್ದಾರೆ. ಪರಸ್ಪರ ಒಪ್ಪಂದದೊಂದಿಗೆ ಪ್ರತ್ಯೇಕವಾಗಿ ವೃತ್ತಿಜೀವನದಲ್ಲಿ ಮುನ್ನಡೆಯಲು ನಿರ್ಧರಿಸಿದ್ದೇವೆ ಎಂದು ಸ್ಪಷ್ಟವಾಗಿ ತಿಳಿಸಿ ಗಾಸಿಪ್ ಗೆ ತೆರೆ ಎಳೆದಿದ್ದಾರೆ.

ಮ್ಯಾನೆಜರ್ ನಿಂದ ಯಾವುದೇ ರೀತಿಯ ಹಣದ ಮೋಸ ಆಗಿಲ್ಲ. ಮ್ಯಾನೇಜರ್ ವೃತ್ತಿಪರಗೆ ಬದ್ಧವಾಗಿದ್ದರು. ಮತ್ತು ಪರಸ್ಪರ ಒಪ್ಪಂದದ ಮೇಲೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಸ್ವತಂತ್ರ ನಿರ್ಧಾರವನ್ನು ತೆಗೆದುಕೊಂಡರು ಎಂದು ರಶ್ಮಿಕಾ ಅವರ ತಂಡ ತಿಳಿಸಿದೆ.

ಸದ್ಯ ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ರಶ್ಮಿಕಾ ರಣಬೀರ್ ಕಪೂರ್ ಗೆ (ranbir kapoor) ನಾಯಕಿಯಾಗಿ ‘ಅನಿಮಲ್’ (animal) ಚಿತ್ರದಲ್ಲಿ ನಟಿಸಿದ್ದಾರೆ. ಅನಿಮಲ್ (Animal) ಸಿನಿಮಾ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ. ಅಲ್ಲದೆ, ಅಲ್ಲು ಅರ್ಜುನ್ (allu arjun) ‘ಪುಷ್ಪ 2’ (pushpa-2) ಚಿತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ನಿತಿನ್​ (Nithin) -ರಶ್ಮಿಕಾ ಕಾಂಬಿನೇಷನ್​ನ ಹೊಸ ಸಿನಿಮಾ ಕೂಡ ಮೂಡಿಬರುತ್ತಿದೆ. ‘ರೇನ್‌ಬೋ ಸಿನಿಮಾ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

 

ಇದನ್ನು ಓದಿ: NVS Recruitment 2023: ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ! 7500 ಹುದ್ದೆಗಳು, ಈ ಕೂಡಲೇ ಅಪ್ಲೈ ಮಾಡಿ 

Leave A Reply