Basavaraj bommai: ದೇಶದಲ್ಲಿ ಮೋದಿ ಎಂದಿಗೂ ಸೋಲಲ್ಲ, ರಾಹುಲ್ ಗಾಂಧಿಗೆ ಮದುವೆ ಆಗಲ್ಲ – ಬಸವರಾಜ ಬೊಮ್ಮಾಯಿ

Karnataka politics news Basavaraj Bommai hits out at India's opposition parties leaders including Congress in Belagavi

Basavaraj bommai: ಲೋಕಸಭಾ ಚುನಾವಣೆಯಲ್ಲಿ(Parliament election) ಪ್ರಧಾನಿ ಮೋದಿಯವರನ್ನು(PM modi) ಸೋಲಿಸಲು ವಿರೋಧಪಕ್ಷಗಳೆಲ್ಲಾ ಒಂದಾಗುತ್ತಿವೆ. ಈ ಬೆನ್ನಲ್ಲೇ ಬಿಜೆಪಿ(BJP) ಟೀಕಾ ಪ್ರಹಾರ ನಡೆಸಿದೆ. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj bommai) ಅವರು ಬಿಹಾರದಲ್ಲಿ ವಿಪಕ್ಷಗಳು ದೇಶ ಉದ್ಧಾರದ ಬಗ್ಗೆ ಚರ್ಚಿಸಿಲ್ಲ, ಮೋದಿಯನ್ನು ಹೇಗೆ ಸೋಲಿಸುವುದು ಎಂದು ಚರ್ಚಿಸಿದ್ದಾರೆ ಎಂದಿದ್ದಾರೆ.

ಹೌದು, ಬಿಹಾರ(Bihar) ರಾಜಧಾನಿ ಪಾಟ್ನಾದಲ್ಲಿ(Patna) ನಡೆಸಿದ ಸಭೆಯಲ್ಲಿ ವಿಪಕ್ಷಗಳ ನಾಯಕರು ಸೇರಿ ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ(PM Modi) ಅವರನ್ನು ಸೋಲಿಸಲು ಪಟ್ನಾದಲ್ಲಿ ತೃತೀಯ ರಂಗದ ನಾಯಕರ ಸಭೆ ನಡೆಸಲಾಗಿದೆ. ಅಲ್ಲಿ ದೇಶದ ಅಭಿವೃದ್ಧಿಗೆ ಚರ್ಚೆ ಮಾಡದೇ, ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಆಗಿದೆ. ಮೋದಿ ಸೋಲಲ್ಲ, ರಾಹುಲ್ ಮದುವೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

ನಗರದ ಗಾಂಧಿಭವನದಲ್ಲಿ(Gandhi buavan) ಭಾನುವಾರ ಆಯೋಜಿಸಿದ್ದ ಬೆಳಗಾವಿ ಮಹಾನಗರ ಹಾಗೂ ಗ್ರಾಮಾಂತರ ಘಟಕದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು ‘ಲೋಕಸಭೆ ಚುನಾವಣೆನೇ ಬೇರೆ. ವಿಧಾನಸಭೆ ಚುನಾವಣೆನೇ(Assembly election) ಬೇರೆ. ನರೇಂದ್ರ ಮೋದಿ ಬಂದ ಮೇಲೆ ಸ್ವಚ್ಛ, ದಕ್ಷ ಆಡಳಿತ ನೀಡಿದ್ದಾರೆ. ದೇಶದಲ್ಲಿ 12 ಕೋಟಿ ಶೌಚಗೃಹ ನಿರ್ಮಾಣವಾಗಿವೆ. ಪ್ರತಿ ಮನೆಗೆ ನೀರನ್ನು ಕೊಡುವ ಬಗ್ಗೆ ಪ್ರಧಾನಿ ಹೇಳಿದ್ದರು. 40 ಲಕ್ಷ ಮನೆಗಳಿಗೆ ರಾಜ್ಯದಲ್ಲಿ ನೀರು ಕೊಡಲಾಗಿದೆ. ರೈತರು, ವಿದ್ಯಾರ್ಥಿಗಳಿಗೆ ಹಲವು ಕಾರ್ಯ ಮಾಡಿದ್ದೇವೆ. ಮೋದಿ ಎದುರಿಸಲು ವಿರೋಧ ಪಕ್ಷದಲ್ಲಿ ಒಬ್ಬ ನಾಯಕ ಇಲ್ಲ. ಕರ್ನಾಟಕದಲ್ಲಿ 25 ಸ್ಥಾನಗಳನ್ನು ಬಿಜೆಪಿ ಮತ್ತೆ ಗೆಲ್ಲುತ್ತದೆ. ದೇಶ ನರೇಂದ್ರ ಮೋದಿ ಆಡಳಿತದಲ್ಲಿ ಸುರಕ್ಷಿತವಾಗಿದೆ. ಪಾಕಿಸ್ತಾನದ ಸೊಕ್ಕು ಅಡಗಿಸಿದ್ದು ಪ್ರಧಾನಿ ನರೇಂದ್ರ ಮೋದಿ. ಹೀಗಾಗಿ ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು’ ಎಂದರು.

ಬಳಿಕ ರಾಜ್ಯ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ ಅವರು ‘ರಾಜ್ಯ ಸಾರ್ವಜನಿಕ ಸಾರಿಗೆ ಸಂಸ್ಥೆಯಾದ ಕೆಎಸ್‌ಆರ್‌ಟಿಸಿ(KSRTC) ಮುಚ್ಚುವ ಸ್ಥಿತಿ ನಿರ್ಮಾಣ ಆಗಿದೆ. ಡೀಸೆಲ್ ಇಲ್ಲದೇ ಬಸ್ ಗಳು ನಿಲ್ಲುವ ಸ್ಥಿತಿ ನಿರ್ಮಾಣ ಆಗಲಿದೆ. ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣ ಆಗಲಿದೆ. ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆದರೆ, ‌ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಯಾವ ಯಾವ ಮಂತ್ರಿ ಗುತ್ತಿಗೆದಾರನಿಗೆ ಕರೆದು ಏನ್ ಹೇಳಿದ್ದಾರೆ ಗೊತ್ತು. ದೇಶದಲ್ಲಿ ದೆಹಲಿಯ ಕಾಂಗ್ರೆಸ್‌ ನಾಯಕರಿಗೆ ಈಗ ಕರ್ನಾಟಕ ಎಟಿಎಂ ಆಗಿದೆ. ಎಲ್ಲ ಕಡೆಗಳ ಪರ್ಸಂಟೇಜ್ ಫಿಕ್ಸ್ ಆಗುತ್ತಿವೆ ಎಂದರು.

ಅಲ್ಲದೆ ಬಿಜೆಪಿ ಸರ್ಕಾರದ ಮೇಲೆ ಪರ್ಸಂಟೇಜ್ ಆರೋಪ ಮಾಡಿದ್ದ ಕಾಂಗ್ರೆಸ್(Congress) ಇದೀಗ ಅಧಿಕಾರಕ್ಕೆ ಬಂದ ನಂತರ ರೇಟ್ ಫಿಕ್ಸ್ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ. ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಯಾವ ಯಾವ ಮಂತ್ರಿ ಗುತ್ತಿಗೆದಾರರನ್ನು ಕರೆದು ಏನ್ ಹೇಳಿದ್ದಾರೆ ಗೊತ್ತು. ಎಲ್ಲಾ ಕಡೆಗಳ ಪರ್ಸಂಟೇಜ್ ಫಿಕ್ಸ್ ಆಗುತ್ತಿವೆ. ದೆಹಲಿಯವರಿಗೆ ಈಗ ಕರ್ನಾಟಕ ಎಟಿಎಂ ಆಗಿದೆ ಎಂದರು.

ಇದನ್ನೂ ಓದಿ: Somshekar Reddy- Rahul gandhi: ರಾಹುಲ್ ಗಾಂಧಿಗೆ ಮದುವೆಯಾಗಿ ಮಕ್ಕಳಿದ್ದಾರೆ..! ಸೋಮಶೇಖರ ರೆಡ್ಡಿ!!

Leave A Reply

Your email address will not be published.