Lakshmi hebbalkar: ಕಾಂಗ್ರೆಸ್ ಅಧಿಕಾರಕ್ಕೆ ಬರೋದಕ್ಕೆ ಚಾಮುಂಡಿ ತಾಯಿಗೆ ಹರಕೆ ಹೊತ್ತಿದ್ದೆ : ಲಕ್ಷ್ಮಿ ಹೆಬ್ಬಾಳ್ಕರ್

Latest Karnataka politics news Congress government minister Lakshmi hebbalkar visits chamundi hill

Lakshmi hebbalkar: ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕೆಂದು ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡಿದ್ದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi hebbalkar) ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಅಂತಾ ತಾಯಿ ಚಾಮುಂಡೇಶ್ವರಿಗೆ ಹರಕೆ ಹೊತ್ತಿದ್ದೆ. ದೇವಿ ಮುಂದೆ ಸೆರಗೊಡ್ಡಿ ಬೇಡಿಕೊಂಡಿದ್ದೆ. ನಾವೀಗ ಅಧಿಕಾರಕ್ಕೆ ಬಂದಿದ್ದೇವೆ. ಆದ್ದರಿಂದ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ. ಅಲ್ಲದೇ ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ಈಗ ದೇವಿಯನ್ನ ಬೇಡಿದ್ದೇನೆ ಎಂದು ತಿಳಿಸಿದ್ದಾರೆ
ಅಷ್ಟೇ ಅಲ್ಲದೇ ಜೂನ್ 27ರಿಂದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಆಗಸ್ಟ್ 17 ನಂತರವೇ ಮನೆಯೊಡತಿಯ ಖಾತೆಗೆ 2000 ರೂಪಾಯಿ ಹಣ ನೀಡಲಾಗುತ್ತದೆ. ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಯಾವುದೇ ಕೊನೆಯ ದಿನಾಂಕ ಮತ್ತು ಶುಲ್ಕವೂ ಇರುವುದಿಲ್ಲ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಕಾಗಿಲ್ಲ. ಅರ್ಜಿ ಸಲ್ಲಿಕೆ ವೇಳೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಅರ್ಜಿ ಸಲ್ಲಿಸಲು ಸ್ಚೀಕೃತಿ ಪತ್ರ ಸಿಕ್ಕರೆ ಫಲಾನುಭವಿಗಳ ಪಟ್ಟಿಗೆ ಸೇರಿಸಬಹುದು. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ಸ್ಪಷ್ಟನೆ ನೀಡಿದ್ಧಾರೆ.

ಇದನ್ನೂ ಓದಿ: ರಶ್ಮಿಕಾ-ವಿಜಯ್ ಡೇಟಿಂಗ್ ಗೆ ಪ್ರೂಫ್ ಕೊಟ್ಟ ಫ್ಯಾನ್ಸ್!

Leave A Reply

Your email address will not be published.