Rain Alert: ಕರಾವಳಿ ಜನತೆಗೆ ಎಚ್ಚರ! 3 ಜಿಲ್ಲೆಗಳಲ್ಲಿ ಭಾರೀ ಮಳೆಯ ಆರೆಂಜ್‌ ಅಲರ್ಟ್‌

Latest Karnataka weather updates Orange alert for heavy rain in these three districts

Share the Article

Rain Alert: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ 24 ಗಂಟೆಯಲ್ಲಿ 115 ಮಿ.ಮೀ ನಿಂದ 204 ಮಿ.ಮೀ ವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರಾವಳಿಯ ಮೂರು ಜಿಲ್ಲೆಗಳಿಗೂ ಆರೆಂಜ್‌ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಸದ್ಯ ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಯಲ್ಲಿ ಆರೆಂಜ್‌ ಅಲರ್ಟ್‌ನ (Rain Alert) ಎಚ್ಚರಿಕೆ ನೀಡಲಾಗಿದೆ.

ಇನ್ನು ಸಮುದ್ರದಲ್ಲಿ 40 ರಿಂದ 55 ಕಿ.ಮೀ ವೇಗದಲ್ಲಿ ಜೋರು ಗಾಳಿ ಬೀಸುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಮುಂಗಾರು ವ್ಯಾಪಿಸಿದ್ದು, ಉತ್ತಮ ಮಳೆಯಾಗುತ್ತಿದೆ. ಮುಂದಿನ ಐದು ದಿನ ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಶುಕ್ರವಾರ ಕಾರವಾರದಲ್ಲಿ ಅತಿ ಹೆಚ್ಚು 14 ಸೆಂ.ಮೀ ಮಳೆಯಾದ ವರದಿಯಾಗಿದೆ. ಉಳಿದಂತೆ ಹೊನ್ನಾವರದಲ್ಲಿ 12, ಮಂಕಿ, ಕುಮಟಾದಲ್ಲಿ ತಲಾ 10, ಗೋಕರ್ಣ, ಶಿರಾಲಿಯಲ್ಲಿ ತಲಾ 9, ಅಂಕೋಲಾ ಗೇರುಸೊಪ್ಪಾ, ಪಣಂಬೂರಿನಲ್ಲಿ ತಲಾ 7 ಸೆಂ.ಮೀ ಮಳೆಯಾದ ವರದಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ, ಬಳ್ಳಾರಿ, ಕಲಬುರಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಸೇರಿ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.

ಇದನ್ನೂ ಓದಿ: Holidays july 2023: ಜುಲೈ ತಿಂಗಳಲ್ಲಿ ಬ್ಯಾಂಕ್ ಕೆಲಸ ಕಾರ್ಯವಿದ್ದರೆ ಈ ದಿನ ಹೋಗಬೇಡಿ! ಜುಲೈ ತಿಂಗಳ ರಜಾ ದಿನಗಳ ಪಟ್ಟಿ ಬಿಡುಗಡೆ, ಇಲ್ಲಿದೆ ಚೆಕ್ ಮಾಡಿ!

Leave A Reply