Basavna gowda yatnal- Basavaraj bommai: ಮಾಜಿ ಸಿಎಂ ಬೊಮ್ಮಾಯಿಗೆ ಖಡಕ್ ಎಚ್ಚರಿಕೆ ಕೊಟ್ಟ ಯತ್ನಾಳ್!! ವೇದಿಕೆಯಲ್ಲೇ ತಿರುಗೇಟು ನೀಡಿದ ಬೊಮ್ಮಾಯಿ!!

Latest news political news Basavaraj bommai Bommai was warned by Yatnal and Bommai replied on the stage

Basavaraj bommai: ‘ಬೊಮ್ಮಾಯಿಯವರೇ ಅವರನ್ನ ನೀವು ಮನೆವರೆಗೂ ಬಿಟ್ಟುಕೊಳ್ಳಬೇಡಿ. ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌. ಆದರೂ ಬರ್ತಾರೆ. ಇದರಿಂದ ನಮ್ಮ ಕಾರ್ಯಕರ್ತರು ಮಲಗಿ ಬಿಡ್ತಾರೆ’ ಎಚ್ಚರ!!

ಹೌದು, ಕೆಲವು ದಿನಗಳಿಂದ ಬಿಜೆಪಿ(BJP)ಯಲ್ಲಿ ಒಳ ಜಗಳಗಳು ನಡೆಯುತ್ತಿವೆ. ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ನಾಯಕರು ಒಬ್ಬರಮೇಲೊಬ್ಬರು ಆರೋಪ ಮಾಡಿಕೊಳ್ಳುತ್ತಿದ್ದಾರೆ. ಆದರೀಗ ಈ ಒಳ ಜಗಳ ಸ್ಪೋಟಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಯಾಕೆಂದರೆ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರು ಇತ್ತೀಚೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj bommai) ಅವರ ಮನೆಗೆ ಭೇಟಿ ನೀಡಿ ಕೆಲ ವಿಚಾರಗಳನ್ನು ಚರ್ಚಿಸಿದ್ದರು. ಇದೀಗ ಈ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕ ಬಸವನಗೌಡ ಯತ್ನಾಳ್(Basavanagowda yatnal) ಅವರು ‘ಬೊಮ್ಮಾಯಿಯವರೇ ಅವರನ್ನ ನೀವು ಮನೆವರೆಗೂ ಬಿಟ್ಟುಕೊಳ್ಳಬೇಡಿ. ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌. ಆದರೂ ಬರ್ತಾರೆ. ಇದರಿಂದ ನಮ್ಮ ಕಾರ್ಯಕರ್ತರು ಮಲಗಿ ಬಿಡ್ತಾರೆ’ ಎಚ್ಚರ ಎಂದಿದ್ದಾರೆ.

ಬೆಳಗಾವಿಯಲ್ಲಿ(Belagavi) ಭಾನುವಾರ ನಡೆದ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಬೊಮ್ಮಾಯಿಯವರೇ ಅವರನ್ನ ನೀವು ಮನೆವರೆಗೂ ಬಿಟ್ಟುಕೊಳ್ಳಬೇಡಿ. ನಾವು ವಿರೋಧ ಪಕ್ಷದವರ(opposition party)ಮನೆಗೆ ಹೋಗುವುದಿಲ್ಲ ಅಂತಾರೆ‌. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಅಂತಾ ಹೇಳಿ. ಅವರನ್ನ ಸ್ವಾಗತಿಸಿಕೊಂಡ್ರೇ ನಮ್ಮ ಕಾರ್ಯಕರ್ತರು ಮಲಗಿ ಬಿಡ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ಹಲಕಟ್‌ಗಿರಿ ಮಾಡೊದಿದ್ರೇ ಬಿಟ್ಟು ಹೋಗಿ. ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ವಿಧಾನಸಭೆ ಚುನಾವಣೆಯಲ್ಲಿ ಯಾರು, ಏನು ಮಾಡಿದರು ಎಂಬುದು ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಬದಲು ಮೊದಲು ನಾಯಕರು ಬದಲಾಗಬೇಕು, ಆಗಲೇ ನಾಯಕರಿಗೆ ಆಗ ಭವಿಷ್ಯವಿದೆ. ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರು ಆಗಲಿದ್ದಾರೆ. ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲಾ ಎಂದ ಯತ್ನಾಳ್ ಹೇಳಿದರು.

ಯತ್ನಾಳ್ ಹೇಳಿಕೆಗೆ ಅದೇ ವೇದಿಕೆಯಲ್ಲಿ ಬಸವರಾಜ ಬೊಮ್ಮಾಯಿ(Bommai) ಅವರು ತಿರುಗೇಟು ನೀಡಿದ್ದು, ಮೂವತ್ತು ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಯಾರ ಜೊತೆಗೂ ನಾನು ರಾಜೀ ಮಾಡಿಕೊಂಡು ರಾಜಕಾರಣ ಮಾಡಿಲ್ಲ. ಮನೆಗೆ ಬಂದವರನ್ನು ಸ್ವಾಗತ ಮಾಡುವುದು ನಮ್ಮ ಪರಂಪರೆಯಾಗಿದೆ. ನಾನೇನೂ ಯಾರನ್ನೂ ಮನೆಯೊಳಗಿನ ರೂಮಿಗೆ ಕರೆದುಕೊಂಡು ಹೋಗಿ ಮಾತನಾಡಿಲ್ಲ. ಕಾಂಗ್ರೆಸ್(Congress) ನಾಯಕರು ಜೊತೆಗಿನ ಎಲ್ಲ ಮಾತುಕತೆಗಳು ಬಹಿರಂಗವಾಗಿಯೇ ನಡೆಯುತ್ತವೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳಗೆ ಮಾಜಿ ಸಿಎಂ‌ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಅಲ್ಲದೆ ಬಿಜೆಪಿ(BJP)ಯೇ ನನ್ನ ತಂದೆ-ತಾಯಿ, ಬಿಜೆಪಿ ಕಾರ್ಯಕರ್ತರು ನನ್ನ ಸಹೋದರ-ಸಹೋದರಿಯರು. ನಾನು ಮುಖ್ಯಮಂತ್ರಿ(CM) ಆಗಿದ್ದಾಗ ಪಕ್ಷ, ಕಾರ್ಯಕರ್ತರ ಆಶಯದಂತೆ ಗೋಹತ್ಯೆ, ಮತಾಂತರ ‌ನಿಷೇಧ ಕಾಯ್ದೆ ಜಾರಿಗೆ ತಂದಿದ್ದೇನೆ. ಸಿಎಂ ಆಗಿದ್ದಾಗ ಕಾರ್ಯಕರ್ತರ ಹಿತ ಕಾದಿದ್ದೇನೆ,‌ ಮುಂದೆಯೂ ಕಾರ್ಯಕರ್ತರ ಹಿತ ಕಾಯುವೆ. ದೇಶ, ಧರ್ಮ ರಕ್ಷಣೆಗೆ ನಾನು ಸದಾ ಜಾಗೃತನಾಗಿ ಕೆಲಸ ಮಾಡುತ್ತೇನೆ. ಚುನಾವಣೆ ‌ಸೋಲನ್ನು ಮರೆತು
ವೇದಿಕೆ ಮೇಲಿನ ಎಲ್ಲ ನಾಯಕರು ಒಂದಾಗೋಣ. ದೇಶದಲ್ಲಿ ‌ಪ್ರಧಾನಿ ನರೇಂದ್ರ ‌ಮೋದಿ ಅವರನ್ನು ‌ಇನ್ನೊಂದು ಅವಧಿಗೆ ಪ್ರಧಾನಿ ಮಾಡೋಣ. ಇದಕ್ಕಾಗಿ ಎಲ್ಲ ಪಕ್ಷಗಳ ನಾಯಕರು,‌ ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡೋಣ ಎಂದು ಬೊಮ್ಮಾಯಿ ಮನವಿ ಮಾಡಿದರು.

 

ಇದನ್ನು ಓದಿ: High Court Order: ಇಸ್ಲಾಂ ನಲ್ಲಿ ಮದ್ವೆಗೆ ಮುಂಚೆ ಮುಟ್ಲೂ ಬಾರ್ದು, ಕಿಸ್ಸೂ ಕೊಡುವಂತಿಲ್ಲ – ಹೈಕೋರ್ಟ್ ಹೊಸ ಆದೇಶ ! 

Leave A Reply

Your email address will not be published.