Siddaramaiah: BJP ವಿರುದ್ಧ 40 % ಕಮಿಷನ್ ತನಿಖೆ ಪಕ್ಕಾ – ಸಿಎಂ ಸಿದ್ದರಾಮಯ್ಯ ರಿಂದ ಬಿಗ್ ಸ್ಟೇಟ್ ಮೆಂಟ್

BJP government scams including 40% commission will be probed Clarified Siddaramaiah

Siddaramaiah: ಹಣ ಕೊಡ್ತೀವಿ ಅಂದ್ರೂ ಕೇಂದ್ರ ಸರ್ಕಾರ ಅಕ್ಕಿ ಪೂರೈಸುತ್ತಿಲ್ಲ. ಕೇಂದ್ರ ಸರ್ಕಾರವೇನು ಪುಕ್ಕಟೆಯಾಗಿ ರಾಜ್ಯಕ್ಕೆ ಅಕ್ಕಿ ಪೂರೈಸಲ್ಲ. ಹಣ ಕೊಡುತ್ತೀವಿ ಎಂದರೂ ಅಕ್ಕಿ ಪೂರೈಸುತ್ತಿಲ್ಲವೆಂದು ಕೇಂದ್ರದ ವಿರುದ್ಧ ಇಂದು ಕೆಂಪೇಗೌಡ ಜಯಂತಿ ಹಿನ್ನಲೆ ಹಾಸನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

 

ಅದಲ್ಲದೆ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ನಡೆಸುವ ವಿಚಾರ ಕುರಿತು ಮಾತನಾಡಿದ ಮುಖ್ಯಮಂತ್ರಿ, ಬಿಜೆಪಿ ಸರ್ಕಾರದ40% ಕಮಿಷನ್ ಆರೋಪ ಸೇರಿ ಎಲ್ಲದರ ಬಗ್ಗೆ ತನಿಖೆಯಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಡಿಸಿದ್ದಾರೆ. ‘ಕೊರೊನಾ ವೇಳೆ ಮೆಡಿಕಲ್ ವಸ್ತುಗಳ ಖರೀದಿಯಲ್ಲಿ ಅವ್ಯವಹಾರ, ಬಿಟ್ ಕಾಯಿನ್, 40% ಕಮಿಷನ್ ಆರೋಪ ಸೇರಿ ಚಾಮರಾಜನಗರದ ಆಕ್ಸಿಜನ್​ ದುರಂತದ ಬಗ್ಗೆಯೂ ಮರು ತನಿಖೆ ಆಗಲಿದೆ ಎಂದು ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೌದು, ಈಗಾಗಲೇ 5 ಗ್ಯಾರಂಟಿ ಪೈಕಿ ಒಂದು ಗ್ಯಾರಂಟಿ ಆಗಿರುವ, ಶಕ್ತಿ ಯೋಜನೆ ಮೂಲಕ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇನ್ನು ಜುಲೈ 1ರಿಂದ ಗೃಹಜ್ಯೋತಿ ಯೋಜನೆಯನ್ನ ಕೂಡ ಜಾರಿಗೆ ತೀರ್ಮಾನ ಮಾಡಲಾಗಿದೆ.

ಆದರೆ ಈಗಾಗಲೇ ಉಚಿತವಾಗಿ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. 10 ಕೆಜಿ ಕೊಡಲು 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು. ಅಷ್ಟು ಪ್ರಮಾಣದ ಅಕ್ಕಿ ನಮಗೆ ಸಿಗುತ್ತಿಲ್ಲ. ಎಫ್​ಸಿಐನವರು ಮೊದಲು ಅಕ್ಕಿ ಪೂರೈಸುವುದಾಗಿ ಹೇಳಿದ್ದರು. ಆ ನಂತರ ರಾಜ್ಯಕ್ಕೆ ಅಕ್ಕಿ ಕೊಡಲ್ಲ ಎಂದು ಹೇಳಿದೆ. ಕೇಂದ್ರದ ಬಳಿ ಅಕ್ಕಿ ಇದ್ದರೂ ರಾಜ್ಯಕ್ಕೆ ಕೊಡಲ್ಲ ಅಂತಿದ್ದಾರೆ ಎಂದು ಅಸಮಧಾನ ಹೊರಹಾಕಿದ್ದಾರೆ.

ಸದ್ಯ ಅಕ್ಕಿ ಸಿಕ್ಕಿದ ಕೂಡಲೇ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Leave A Reply

Your email address will not be published.