Kempegowda International Award: ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರ ಹೆಸರು ರಿಲೀಸ್ : 2023ರ ಪ್ರಶಸ್ತಿ ಯಾರಿಗೆ ಒಲಿದಿದೆ ಗೊತ್ತಾ?
Latest news bengalore kannada news Kempegowda International Award Winners Name Released
Kempegowda International Award: ಬೆಂಗಳೂರು : ನಾಳೆ ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಭಿವೃದ್ಧಿ (Kempegowda International Award) ಪ್ರಾಧಿಕಾರದ ವತಿಯಿಂದ ಈ ವರ್ಷದ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತದೆ.
ಇಂದು ನಗರದ ಕುಮಾರಕೃಪಾ ಹಳೇ ಅತಿಥಿ ಗೃಹದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ, ಈ ಬಾರಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪಟ್ಟಿಯನ್ನು ಘೋಷಣೆ ಮಾಡಿದ್ದಾರೆ ಹಾಗಿದ್ರೆ ಈ ಬಾರಿ ಪ್ರಶಸ್ತಿ ಲಭ್ಯವಾಗಿದೆ ಅನ್ನೋದರ ಮಾಹಿತಿ ಇಲ್ಲಿದೆ ಓದಿ..
ಈ ಬಾರಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ದೇಶದ ಪ್ರತಿಷ್ಟಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜಿರೋಧ ಸಂಸ್ಥಾಪಕ ನಿತಿನ್ ಕಾಮತ್ , ಅಲ್ಲದೇ ಜಯದೇವ ಹೃದ್ರೋಗ ಸಂಸ್ಥೆಗೂ ಪ್ರಶಸ್ತಿ ದೊರಕಲಿದೆ. ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಕುದುರೆ ಮೇಲೆ ಕುಳಿತಿರುವ ಕೆಂಪೇಗೌಡರ ಪ್ರತಿಮೆಯನ್ನು ಒಳಗೊಂಡಿದೆ ಈ ವಿಚಾರಕ್ಕೆ ಸಂಬಂಧಿಸಿ ಒಂದು ಸಮಿತಿ ರಚನೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿ ನಡೆಸಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.