H. D. Kumaraswamy: ಬೆಲೆ ಏರಿಕೆ ಪಟ್ಟಿ ನೋಡಿದ್ರೆ ಎದೆ ನಡಗತ್ತೆ: ಕಾಂಗ್ರೆಸ್ ಮೇಲೆ ಎಚ್.ಡಿ.ಕುಮಾರಸ್ವಾಮಿ ಕಿಡಿ !

latest news politics news HD Kumaraswamy has expressed anger against the Congress over the price hike

H. D. Kumaraswamy: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರವೇರಿದ ಬೆನ್ನಲ್ಲೆ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿತಟ್ಟಿದೆ. ಈಗಾಗಲೇ ವಿದ್ಯುತ್‌ ದರ, ಹಾಲಿನ ದರ, ಮದ್ಯದ ದರ ಏರಿಕೆಯಾಗಿದ್ದು, ಇದೀಗ ಆಹಾರ ಪದಾರ್ಥಗಳ ದರವೂ ಗಗನಕ್ಕೇರಿದೆ. ತರಕಾರಿ ಕೊಳ್ಳಲು ಕೈ ಹಾಕಿದರೆ ಕೈ‌ ಸುಟ್ಟುಕೊಳ್ಳುವಂತಾಗಿದೆ. ಪಂಚ ಗ್ಯಾರಂಟಿಗಳು ಜಾರಿಯಾದ ಬೆನ್ನಲ್ಲೇ ಬೆಲೆ ಏರಿಕೆ ಗಗನಕ್ಕೇರಿದೆ ಎಂದೇ ಹೇಳಬಹುದು. ಇದೀಗ ಬೆಲೆ ಏರಿಕೆ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ (H. D. Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಈ ಸರ್ಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ’ ಎಂದು ಆಹಾರ ಪದಾರ್ಥಗಳ ಬೆಲೆ ನಿರಂತರವಾಗಿ ಏರಿಕೆ ಆಗುತ್ತಿದ್ದರೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿ ಟ್ವೀಟ್ ಮಾಡಿದ್ದಾರೆ.

ಗ್ಯಾರಂಟಿ ಘೋಷಿಸಿ, ‘ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಕಾಂಗ್ರೆಸ್ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿರುವುದು ಪರಿವೆಯೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಇದು ಸರ್ಕಾರದ ಗಮನಕ್ಕೇ ಬಂದೇ ಇಲ್ಲ ಎನ್ನುವಂತೆ ಕಾಂಗ್ರೆಸ್ ವರ್ತಿಸುತ್ತಿದೆ.

ಸರ್ಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ಸರ್ಕಾರ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದಿದೆ. ಮಾರುಕಟ್ಟೆಯಲ್ಲಿ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕಿ ಬೆಲೆ ಕೆಜಿಗೆ ಸರಾಸರಿ ₹20 ಏರಿದೆ. ಟೊಮ್ಯಾಟೋ ಕೆಜಿಗೆ ₹100 ಮುಟ್ಟಿದೆ. ಇದರಿಂದ ರೈತನಿಗೂ ಲಾಭ ಇಲ್ಲ, ಗ್ರಾಹಕನಿಗೂ ಇಲ್ಲ. ಜನರು ಬೆಲೆಯ ಬಿಸಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ ಎಂದು ಎಚ್‍ಡಿಕೆ ಕಿಡಿಕಾರಿದ್ದಾರೆ.

Leave A Reply

Your email address will not be published.