Gruha jyoti Scheme: 200 ಯುನಿಟ್ ಕರೆಂಟ್ ಬಗ್ಗೆ ಬಿಗ್ ಅಪ್ಡೇಟ್!! ‘ಗೃಹಜ್ಯೋತಿ’ ಫಲಾನುಭವಿಗಳಿಗಿದು ಗುಡ್ ನ್ಯೂಸ್!!
Latest Karnataka news Congress guarantee A new update of gruha Jyoti scheme good news about 200 unit current
Gruha Jyoti scheme : ಕಾಂಗ್ರೆಸ್ ಸರ್ಕಾರ (Congress Govt) ವಿಧಾನಸಭೆ ಚುನಾವಣೆಗೂ(Assembly election) ಮುನ್ನ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳ (Five Guarantees) ಪೈಕಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆಗೆ (Gruha Jyoti Scheme) ಈಗಾಗಲೇ ಅರ್ಜಿ ಸ್ವೀಕಾರ ಆರಂಭವಾಗಿದೆ. ಆನ್ಲೈನ್ ಹಾಗೂ ಆಫ್ಲೈನ್ ಮೂಲಕವೂ ಅರ್ಜಿ ಹಾಕಬಹುದು. ಈ ಬೆನ್ನಲ್ಲೇ ಈ ಗೃಹ ಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಕುರಿತಾಗಿ ಇಂಧನ ಸಚಿವ ಕೆ. ಜೆ. ಜಾರ್ಜ್(K J George) ಅವರು ವಿದ್ಯುತ್ ಬಳಕೆಯ ಬಗ್ಗೆ ಗುಡ್ ನ್ಯೂಸ್ ನೀಡಿದ್ದಾರೆ.
ಹೌದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಹವಾ ರಾಜ್ಯದಲ್ಲಿ ಜೋರಾಗಿದೆ. ಅಂತೆಯೇ ಉಚಿತ ವಿದ್ಯುತ್ ಯೋಜನೆಯ ಫಲಾನುಭವಿಗಳಾಗಲು ಜನ ಅರ್ಜಿ ಸಲ್ಲಿಸುತ್ತಿದ್ದು, ಇದಕ್ಕೆ ಭರ್ಜರಿಯಾಗಿ ರೆಸ್ಪಾನ್ಸ್(Responce) ಬರುತ್ತಿದೆ. ಸದ್ಯ ಈ ಬಗ್ಗೆ ಸಚಿವ ಜಾರ್ಜ್ ಅವರು ಮಾಹಿತಿ ನೀಡಿದ್ದು, ‘ಗೃಹಜ್ಯೋತಿ ಯೋಜನೆಯು ಆಗಸ್ಟ್ 1 ರಿಂದ ಜಾರಿಗೆ ಬರಲಿದ್ದು ಅಂದಿನಿಂದ ಜನರು ಶೂನ್ಯ ಬಿಲ್ ಪಡೆಯಲಿದ್ದಾರೆ. ಆದರೆ ಈ ಸೌಲಭ್ಯ ಪಡೆದು ಕೊಳ್ಳಲು ನೋಂದಣಿ ಕಡ್ಡಾಯ ಮಾಡಬೇಕು. ಈ ಯೋಜನೆಯನ್ನು ಜುಲೈಯಿಂದಲೇ ಅನುಷ್ಠಾನ ಮಾಡುತ್ತೇವೆ. 200 ಯೂನಿಟ್‍ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡಿದ ಮನೆಗಳು ಆಗಸ್ಟ್ ನಿಂದ ಬಿಲ್ ಪಾವತಿ ಮಾಡುವಂತಿಲ್ಲ’ ಎಂದಿದ್ದಾರೆ.
ಅಲ್ಲದೆ ಇನ್ನೂರು ಯೂನಿಟ್ ಗಿಂತ ಹೆಚ್ಚು ಬಳಕೆ ಮಾಡಿದರೆ ವಿದ್ಯುತ್ ಬಿಲ್ ಪೂರ್ಣ ಮನೇಯವರೇ ಪಾವತಿಸಬೇಕು. 200 ಯುನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಮಾತ್ರ ಗೃಹ ಜ್ಯೋತಿ ಯೋಜನೆ ದೊರೆಯಲಿದೆ. ಗೃಹಜ್ಯೋತಿ ಯೋಜನೆ (Gruha Jyothi Scheme) ಯ ಮೂಲಕ ಜನರಿಗೆ ಉಚಿತ ವಿದ್ಯುತ್ ನೀಡಲಾಗುವುದು ಚುನಾವಣೆ ಮೊದಲು ಭರವಸೆ ನೀಡಿದ್ದೇವು, ಅದರಂತೆ ಮಾತು ನೆರವೇರಿಸಿದ್ದೇವೆ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದ್ದಾರೆ
ಅಂದಹಾಗೆ ಗೃಹಜ್ಯೋತಿ ಯೋಜನೆ (Gruha Jyothi Scheme) ಗೆ ಜೂನ್ 18ರಿಂದಲೇ ನೋಂದಣಿ ಆರಂಭವಾಗಿದ್ದು ಜನರು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಗೃಹ ಜ್ಯೋತಿಯೋಜನೆ (Gruha Jyothi Scheme) ಗೆ ಅರ್ಜಿ ಸಲ್ಲಿಕೆ ಮಾಡಲು ಸುಲಭ ವಿಧಾನ ಇದ್ದು , ಸೇವಾಸಿಂಧು ಪೋರ್ಟಲ್‌ನಲ್ಲಿ ವಿದ್ಯುತ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಗಳನ್ನು ಹಾಕಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.