Home Karnataka State Politics Updates Uniform civil code: ತಡರಾತ್ರಿ ಪ್ರಧಾನಿ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ : ಏಕರೂಪ...

Uniform civil code: ತಡರಾತ್ರಿ ಪ್ರಧಾನಿ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ : ಏಕರೂಪ ನಾಗರಿಕ ಸಂಹಿತೆ ಜಾರಿಗೆ ರೂಪುರೇಷೆ ?

Uniform civil code

Hindu neighbor gifts plot of land

Hindu neighbour gifts land to Muslim journalist

Uniform civil code : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ತಡರಾತ್ರಿ ಬಿಜೆಪಿಯ ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಮಹತ್ವದ ಸಭೆ ನಡೆದಿದೆ ಎನ್ನಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಕೆಲ ದಿನಗಳ ಹಿಂದೆ ಮಧ್ಯಪ್ರದೇಶದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು( Uniform civil code ) ಜಾರಿ ಮಾಡುವ ಸುಳಿವು ನೀಡಿದ್ದರು. ದೇಶವು ಎರಡು ಕಾನೂನುಗಳ ಅಡಿಯಲ್ಲಿ ನಡೆಸಲು ಸಾಧ್ಯವಿಲ್ಲ ಎಂದಿದ್ದರು.

ಸಂಸತ್ ಚುನಾವಣೆಗೆ 6 ತಿಂಗಳು ಮುನ್ನವೇ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಕುರಿತೂ ಸಭೆಯಲ್ಲಿ ಚರ್ಚೆ ನಡೆದಿದ್ದು, ಲೋಕಸಭಾ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:  ರಥಯಾತ್ರೆ ವೇಳೆ ಹೈವೋಲ್ಟೇಜ್ ತಂತಿ ಸ್ಪರ್ಶಿಸಿ ದುರ್ಘಟನೆ, 2 ಮಕ್ಕಳ ಸಹಿತ 7 ಮಂದಿ ಸುಟ್ಟು ಕರಕಲು