Free Bus Service: ಮಹಿಳೆಯರಿಗೆ ಇನ್ಮುಂದೆ ಸ್ಮಾರ್ಟ್ ಕಾರ್ಡ್ ಕಡ್ಡಾಯ ; ಈ ದಿನದಿಂದಲೇ ಜಾರಿ !

latest news Smart card is mandatory for women in Free Bus Service

Free Bus Service: ಕಾಂಗ್ರೆಸ್ ಸರ್ಕಾರದ (Congress Government) ತೀವ್ರ ಜನ ಬೇಡಿಕೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ (Shakti Scheme) ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದ್ದಾರೆ. ರಾಜ್ಯದ ಉದ್ದಗಲಕ್ಕೆ ಕರ್ನಾಟಕ ಸಾರಿಗೆಯ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ (Free Bus Service) ಸೌಲಭ್ಯ ರಾಜ್ಯ ಸರ್ಕಾರ ಒದಗಿಸಿದೆ. ಸದ್ಯ ಕರ್ನಾಟಕ ಸರ್ಕಾರದ (karnataka Government) ಶಕ್ತಿ ಯೋಜನೆಯ (Shakthi Scheme) ಉಚಿತ ಬಸ್‌ ಪ್ರಯಾಣಕ್ಕೆ (Free bus travel) ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗಿದೆ. ದಿನೇ ದಿನೇ ನಾರಿಮಣಿಯರ ಪ್ರಯಾಣ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣದ ಸಂದರ್ಭದಲ್ಲಿ ಮ‌ಹಿಳೆಯರು ಗುರುತಿನ ಚೀಟಿ (ಆಧಾರ್ ಕಾರ್ಡ್) ತೋರಿಸಿದರೆ, ಅವರಿಗೆ ಶೂನ್ಯ ದರದ ಟಿಕೆಟ್ ನೀಡಲಾಗುತ್ತಿದೆ. ಮುಂದಿನ ದಿನದಲ್ಲಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಸಿಗಲಿದೆ. ಈ ಸ್ಮಾರ್ಟ್‌ ಕಾರ್ಡ್‌ (Shakti smart Card) ಅನ್ನು ಉಚಿತ ಪ್ರಯಾಣದ ವೇಳೆ ತೋರಿಸುವುದನ್ನು ಕಡ್ಡಾಯ ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಯ ಸ್ಮಾರ್ಟ್‌ ಕಾರ್ಡ್‌ಗಾಗಿ (Shakti smart cards) ಅರ್ಜಿ ಸಲ್ಲಿಸಲು ಹೊಸದೊಂದು ಪೋರ್ಟಲ್ ಶೀಘ್ರವೇ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ.

ಮುಂದಿನ ಮೂರು ತಿಂಗಳವರೆಗೆ ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಮಹಿಳೆಯರು ಮೂರು ತಿಂಗಳೊಳಗೆ ‘ಶಕ್ತಿ’ ಸ್ಮಾರ್ಟ್ ಕಾರ್ಡ್ ಪಡೆಯಬೇಕು. ಮೂರು ತಿಂಗಳ ಗಡುವಿನ ನಂತರ ಸ್ಮಾರ್ಟ್ ಕಾರ್ಡ್‌ಗಳನ್ನು ಕಡ್ಡಾಯವಾಗಲಿದೆ.

ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು. ಅರ್ಜಿ ಸಲ್ಲಿಸಲು ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು.

 

ಇದನ್ನು ಓದಿ: ಕರ್ನಾಟಕದ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ! 

Leave A Reply

Your email address will not be published.