Anna bhagya Scheme: ಅನ್ನಭಾಗ್ಯದ ದುಡ್ಡು ಬೇಕಂದ್ರೆ ಇಂದೇ ಇದನ್ನು ಮಾಡಿ ! ಇಲ್ಲಾಂದ್ರೆ ದುಡ್ಡು ಇಲ್ಲ, ಅಕ್ಕಿಯೂ ಇಲ್ಲ.. !!
Latest news politics Anna bhagya Scheme we will give money instead of rice says H Parameshwara
ಚುನಾವಣಾ ವೇಳೆ ಕಾಂಗ್ರೆಸ್(Congress) ಅನ್ನಭಾಗ್ಯ(Annabhagya) ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಘೋಷಿಸಿತ್ತು. ಆದರೆ ಈಗ ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಗೆ ಹಿನ್ನೆಡೆ ಉಂಟಾಗಿದ್ದು, ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಕೊಡುವುದರೊಂದಿಗೆ ಉಳಿದ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದಾಗಿ ಘೋಷಿಸಿದೆ. ಇದೀಗ ಹಣಭಾಗ್ಯಕ್ಕಾಗಿ ಸರ್ಕಾರ ಷರತ್ತುಗಳನ್ನು ವಿಧಿಸಿದೆ.
ಹೌದು, ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ (Annabhagya Scheme) 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಣ ನೇರವಾಗಿ ಕುಟುಂಬದ ಯಜಮಾನನ ಖಾತೆಗೆ ಜಮೆಯಾಗುತ್ತದೆ. ಆದರೀಗ ಈ ಹಣಕ್ಕಾಗಿ ಅಧಾರ್ ಲಿಂಕ್ (Aadhaar Card Link) ಕಡ್ಡಾಯವಾಗಿರುತ್ತದೆ.
ಅಂದಹಾಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾಗಲು ನೀವು ಬಿಪಿಎಲ್ ಕಾರ್ಡ್(BPL Card) ಹೊಂದಿರಬೇಕು. ಅನ್ನಭಾಗ್ಯದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗಬೇಕಾದರೆ ಬ್ಯಾಂಕ್ ಖಾತೆ (Bank Account) ಜೊತೆ ಆಧಾರ್ ಲಿಂಕ್ ಕಡ್ಡಾಯವಾಗಿ ಆಗಿರಬೇಕು. ಪಡಿತರ ಚೀಟಿಯಲ್ಲಿ (Ration Card) ಮನೆ ಮುಖ್ಯಸ್ಥರು ಯಾರು ಅನ್ನೋದು ಕಾರ್ಡ್ ನಲ್ಲಿ ನಮೂದಾಗಿರುತ್ತದೆ. ಮನೆಯ ಮುಖ್ಯಸ್ಥರು ಸಾಮಾನ್ಯವಾಗಿ ಮಹಿಳೆಯರೇ ಆಗಿರುತ್ತಾರೆ. ಮನೆ ಯಜಮಾನಿಯ ಹೆಸರಿನಲ್ಲಿ ಬ್ಯಾಂಕ್ ಅಕೌಂಟ್ ಖಾತೆ ಇರಬೇಕು.
ಅಲ್ಲದೆ ಒಂದು ವೇಳೆ ಮನೆಯ ಮುಖ್ಯಸ್ಥರದ್ದು ಇಲ್ಲದೇ ಹೋದಲ್ಲಿ, ಪಡಿತರ ಚೀಟಿಯಲ್ಲಿರುವ ಯಾರಾದರೂ ಒಬ್ಬರ ಹೆಸರಿನಲ್ಲಿ ಖಾತೆ ಆಧಾರ್(Adhar card) ಲಿಂಕ್ ಆಗಿರಬೇಕು ಎಂದು ಸರ್ಕಾರ ಹೇಳಿದೆ. ಇನ್ನು ಈ ಧನಭಾಗ್ಯಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಕೆ ಮಾಡಬೇಕಿಲ್ಲ. ಆದರೆ ಆಧಾರ್ ಲಿಂಕ್ಡ್ ಬ್ಯಾಂಕ್ ಖಾತೆ ವಿವರ ಮಾತ್ರ ಕಡ್ಡಾಯವಾಗಿರುತ್ತದೆ.
ಅಲ್ಲದೆ ಆಹಾರ ಇಲಾಖೆ ಮಾಹಿತಿ ಪ್ರಕಾರ, ಸದ್ಯ 1.28 ಕೋಟಿ ಫಲಾನುಭವಿಗಳು ಇದ್ದು ಅದರಲ್ಲಿ 6 ಲಕ್ಷ ಖಾತೆದಾರರಲ್ಲಿ ಆಕೌಂಟ್ ಸಮಸ್ಯೆ ಹಾಗೂ ಅಧಾರ್ ಲಿಂಕ್ ಆಗದೇ ಇರುವ ಸಮಸ್ಯೆ ಇದೆ. ಹೀಗಾಗಿ ಜುಲೈ 1 ನಲ್ಲಿ ಇವರಿಗೆ ದುಡ್ಡು ಕೊಡಲು ಸಮಸ್ಯೆಯಾಗಬಹುದು. ಅಕೌಂಟ್, ಆಧಾರ್ ಲಿಂಕ್ ಮಾಡಿಸಿದ ಬಳಿಕವಷ್ಟೇ ದುಡ್ಡು ನೇರವಾಗಿ ಡಿಬಿಟಿ ಮೂಲಕ ಜಮೆಯಾಗುತ್ತೆ ಅಂತಾ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಬಿಪಿಎಲ್ ಕಾರ್ಡ್ ಇರುವವರು ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಈ ಕೂಡಲೇ ಬ್ಯಾಂಕ್ ಗೆ ತೆರಳಿ ಲಿಂಕ್ ಮಾಡಿಸಿ.