Odisha train accident reason: ಒಡಿಶಾ ರೈಲು ಅವಘಡಕ್ಕೆ ಕೊನೆಗೂ ಕಾರಣ ಪತ್ತೆ: ರೈಲ್ವೆ ಸುರಕ್ಷತಾ ಕಮಿಷನರ್ ತನಿಖಾ ವರದಿ ಬಹಿರಂಗ

Latest national news Reason for Odisha train accident finally found the commissioner of Railways safety investigation report revealed

Odisha train accident reason: ಭುವನೇಶ್ವರ: ಒಟ್ಟು 291 ಪ್ರಯಾಣಿಕರ ಭೀಕರ ಸಾವಿಗೆ ಕಾರಣವಾದ ಒಡಿಶಾದ ಬಾಲೇಶ್ವರದಲ್ಲಿ ನಡೆದ ರೈಲು ದುರಂತಕ್ಕೆ ಕಾರಣ(Odisha train accident reason) ಪತ್ತೆಯಾಗಿದೆ. ಎಂದು ರೈಲ್ವೆ ಸುರಕ್ಷತಾ ಕಮಿಷನರ್ (ಸಿಆರ್‌ಎಸ್‌)  ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಹೇಳಲಾಗಿದೆ.

ಪಿಟಿಐ ಸುದ್ದಿ ಸಂಸ್ಥೆನೀ ಬಗ್ಗೆ ವರದಿ ಮಾಡಿದ್ದು, ರೈಲ್ವೆ ಸುರಕ್ಷತಾ ಕಮಿಷನರ್ (ಸಿಆರ್‌ಎಸ್‌) ಸಲ್ಲಿಸಿರುವ ತನಿಖಾ ವರದಿಯು ಘಟನೆಗಳಿಗೆ ಸಿಬ್ಬಂದಿಗಳ ಮಾನವ ಲೋಪವೇ ಕಾರಣ ಎಂದು ಉಲ್ಲೇಖಿಸಿದೆ ಎಂದು ಹೇಳಿದೆ. ಟೆಲಿಕಾಂ ಇಲಾಖೆ ಮತ್ತು ಸ್ಟೇಷನ್‌ ನ ಟ್ರಾಫಿಕ್ ಕಾರ್ಯಾಚರಣೆ ಇಲಾಖೆ ಕರ್ತವ್ಯದಲ್ಲಿದ್ದ ಸಿಬ್ಬಂದಿಯ ತಪ್ಪಿನಿಂದಲೇ ಈ ದುರಂತ ಸಂಭವಿಸಿದೆ ವರದಿಯಲ್ಲಿ ಹೇಳಲಾಗಿದೆ ಎನ್ನಲಾಗಿದೆ. ರೈಲ್ವೆ ಮಂಡಳಿಗೆ ಗುರುವಾರ ಈ ವರದಿ ಸಲ್ಲಿಕೆಯಾಗಿದ್ದು, ಅದರ ಕೆಲವು ಸತ್ಯಗಳು ಬಹಿರಂಗ ಆಗುತ್ತಿವೆ. ಅವತ್ತು ಸಿಗ್ನಲ್‌ ವಿಭಾಗದ ಸಿಬ್ಬಂದಿ ದೋಷಯುಕ್ತ ಸಿಗ್ನಲ್ ವ್ಯವಸ್ಥೆಯನ್ನು ಸರಿಪಡಿಸಿದ್ದರು. ಆದರೆ ಪ್ರಮಾಣೀಕೃತ ಕಾರ್ಯಾಚರಣೆ ವಿಧಾನದ (Standard operating procedure) ಪ್ರಕಾರ ಮಾರ್ಗಸೂಚಿ ಪಾಲನೆ ಮಾಡುವಲ್ಲಿ ಅಲ್ಲಿನ ಸಿಬ್ಬಂದಿ ವಿಫಲರಾಗಿದ್ದರು ಎಂದು ತನಿಖೆ ವೇಳೆ ಪತ್ತೆಯಾಗಿದೆ ಎಂದು ಸುದ್ದಿ ಮೂಲಗಳು ಉಲ್ಲೇಖಿಸಿದೆ.

ಒಡಿಶಾದ ಬಾಲೇಶ್ವರ ಜಿಲ್ಲೆಯಲ್ಲಿ ಜೂನ್‌ 2 ರಂದು ಸಂಭವಿಸಿದ ಯಶವಂತಪುರ–ಹೌರಾ ಎಕ್ಸ್‌ಪ್ರೆಸ್‌ ರೈಲು, ಕೋರೊಮಂಡಲ್‌ ಎಕ್ಸ್‌ಪ್ರೆಸ್‌ ರೈಲು ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ನಡೆದ ಅಪಘಾತದಲ್ಲಿ 291 ಮಂದಿ ಮೃತಪಟ್ಟು, 1200 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. Bheekarab ದುರಂತದ ನಂತರ ಆಗ್ನೇಯ ರೈಲ್ವೆ ಹಲವು ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ಸಿಗ್ನಲ್‌ ವ್ಯವಸ್ಥೆ ಸರಿಪಡಿಸಲು ಅಂದು ನಿರ್ವಾಹಕ ‘ಸಂಪರ್ಕ ಕಡಿತ’ಕ್ಕೆ ಸ್ಟೇಷನ್‌ ಮಾಸ್ಟರ್‌ಗೆ ಮನವಿ ಸಲ್ಲಿಸಿದ್ದರು. ಅದರಂತೆ ಕೆಲಸ ನಡೆದಿತ್ತು. ಆ ದುರಸ್ತಿ ಕೆಲಸ ಪೂರ್ಣಗೊಂಡ ನಂತರ ಪುನಃ ಸಂಪರ್ಕ ಕಲ್ಪಿಸುವ ಎಲೆಕ್ಟ್ರಾನಿಕ್‌ ಇಂಟರ್‌ಲಾಕಿಂಗ್‌ ಸಿಗ್ನಲ್‌ ವ್ಯವಸ್ಥೆ ಸಹಜವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸುತ್ತೋಲೆ ಹೊರಡಿಸಿ ಘೋಷಿಸಲಾಗಿತ್ತು. ಆದರೆ ಈ ಮಾರ್ಗವಾಗಿ ರೈಲು ಹಾದು ಹೋಗುವ ಮೊದಲು ಸುರಕ್ಷತಾ ಕ್ರಮವಾಗಿ ಸಿಗ್ನಲ್‌ ವ್ಯವಸ್ಥೆಯನ್ನು ಪರೀಕ್ಷಿಸಿರಲಿಲ್ಲ. ಹೀಗಾಗಿ ದೊಡ್ಡ ಸುರಕ್ಷತಾ ಫಾಲ್ಟ್ ಆಗಿತ್ತು. ಆದುದರಿಂದ ಭೀಕರ ದುರಂತಕ್ಕೆ ಒಟ್ಟಾಗಿ ಸಿಗ್ನಲ್‌, ಟೆಲಿಕಾಂ ಇಲಾಖೆ ಮತ್ತು ಸ್ಟೇಷನ್‌ ಕಾರ್ಯಾಚರಣೆ ಸಿಬ್ಬಂದಿಯೇ ನೇರ ಹೊಣೆ ಎಂದು ವರದಿ ತಿಳಿಸಿದೆ. ಈ ಘಟನೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಆಗಿರಬಹುದು ಅಥವಾ ಉದ್ದೇಶಪೂರ್ವಕವಾಗಿ ಈ ರೀತಿ ಮಾದಲಾಗಿರಬಹುದು. ಅದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಆದರೆ, ಈ ತ್ರಿವಳಿ ರೈಲು ಅಪಘಾತ ಪ್ರಕರಣದ ಕುರಿತ ಸಿಬಿಐ ತನಿಖೆ ಮೇಲೆ ಯಾವುದೇ ಪ್ರಭಾವ ಅಥವಾ ಹಸ್ತಕ್ಷೇಪ ಉಂಟಾಗದಿರಲಿ ಎಂಬ ಉದ್ದೇಶದಿಂದ ಸಿಆರ್‌ಎಸ್‌ ತನಿಖಾ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸದೇ ಇರಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಆದರೆ ಅದಾಗಲೇ ಮಾಧ್ಯಮಗಳಲ್ಲಿ ವರದಿಯ ಪ್ರಮುಖ ಅಂಶಗಳು ಪ್ರಸಾರವಾಗಿದ್ದು, ಈ ವರದಿ ಕುರಿತು ಪ್ರತಿಕ್ರಿಯೆ ನೀಡಲು ಆ ಮಂಡಳಿಯ ವಕ್ತಾರರು ನಿರಾಕರಿಸಿದ್ದಾರೆ.

ಇದನ್ನೂ ಓದಿ: Monsoon 2023: ಕರ್ನಾಟಕದ ಈ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವ! ರೆಡ್‌ ಅಲರ್ಟ್‌ ಘೋಷಣೆ ಮಾಡಿದ ಹವಾಮಾನ ಇಲಾಖೆ

Leave A Reply

Your email address will not be published.