Bank Job: ಸರ್ಕಾರಿ ಬ್ಯಾಂಕ್ ಮ್ಯಾನೇಜರ್ ಮಹಾ ರೆಕ್ರೂಟ್ ಮೆಂಟ್ ..!! ಬರೋಬ್ಬರಿ 1,000 ಸಾವಿರ ಪೋಸ್ಟ್ ಗೆ ಅರ್ಜಿ ಆಹ್ವಾನ !

latest news government jobs Central Bank Recruitment

Central Bank Recruitment: ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಕೆಲಸ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಒಂದು ಇಲ್ಲಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ಒಂದು ಸಾವಿರ ಮ್ಯಾನೇಜರ್‌ಗಳ ನೇಮಕಕ್ಕೆ (Central Bank Recruitment 2023) ಅರ್ಜಿ ಆಹ್ವಾನಿಸಿದೆ.

ಹೌದು, ದೇಶಾದ್ಯಂತ 4,500 ಶಾಖೆಗಳನ್ನು ಹೊಂದಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಈಗಾಗಲೇ 5,77,000 ಕೋಟಿ ರೂ.ಗಳ ವ್ಯವಹಾರ ನಡೆಸುತ್ತಿದೆ. ಸದ್ಯ ಮಿಡಲ್ ಮ್ಯಾನೇಜ್‌ಮೆಂಟ್ ಲೆವೆಲ್‌ನ (SCALE-II) ಒಂದು ಸಾವಿರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು, ಅರ್ಜಿ ಆಹ್ವಾನ ಮಾಡಿದೆ.

ಒಂದು ಸಾವಿರ ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 150, ಎಸ್‌ಟಿ ಅಭ್ಯರ್ಥಿಗಳಿಗೆ 75, ಓಬಿಸಿ ಅಭ್ಯರ್ಥಿಗಳಿಗೆ 270, ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 100 ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 405 ಹುದ್ದೆಗಳನ್ನು ಮೀಸಲಿಡಲಾಗಿದೆ.

ವಿದ್ಯಾರ್ಹತೆ ಮತ್ತು ಅನುಭವ:
ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. CAIIB ಯಲ್ಲಿ ಅರ್ಹತೆ ಪಡೆದವರೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿದ್ಯಾರ್ಹತೆ ಹೊಂದಿದವರಿಗೆ ಆಧ್ಯತೆ ನೀಡಲಾಗುತ್ತದೆ.

ವಿದ್ಯಾರ್ಹತೆಯ ಜತೆಗೆ ಅಭ್ಯರ್ಥಿಗಳು ಸಾರ್ವಜನಿಕ ಬ್ಯಾಂಕುಗಳಲ್ಲಿ ಖಾಸಗಿ ಬ್ಯಾಂಕುಗಳಲ್ಲಿ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸರ್ ಹುದ್ದೆಯಲ್ಲಿ ಮೂರು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಅಥವಾ ಸಾರ್ವಜನಿಕ ಬ್ಯಾಂಕುಗಳಲ್ಲಿ ಖಾಸಗಿ ಬ್ಯಾಂಕುಗಳಲ್ಲಿ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಕ್ಲರ್ಕ್ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಆರು ವರ್ಷಗಳ ಅನುಭವ ಇರಬೇಕು.

ವೇತನ ಶ್ರೇಣಿ ರೂ.: 48,170-1,740(1)-49,910-
1,990(10)-69,810

ಹೆಚ್ಚಿನ ಮಾಹಿತಿಗೆ ವೆಬ್ ಸೈಟ್: https://www.centralbankofindia.c

ಸಂಪೂರ್ಣ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ (Click Here) ಮಾಡಿ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ (ClickHere) ಮಾಡಿ.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 32 ವರ್ಷ ಮೀರಿರಬಾರದು. ವಯೋಮಿತಿಯನ್ನು ದಿನಾಂಕ 31-05-2023 ಕ್ಕೆ ಲೆಕ್ಕ ಹಾಕಲಾಗುತ್ತದೆ. ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿರುತ್ತದೆ.

ಅರ್ಜಿ ಶುಲ್ಕ:
ಎಸ್‌ಸಿ/ ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳು 175 (+GST) ರೂ. ಮತ್ತು ಉಳಿದ ಎಲ್ಲ ಅಭ್ಯರ್ಥಿಗಳು 850 (+GST) ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2023 ಆಗಿದೆ.

ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಆನ್‌ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿರುತ್ತದೆ. ನೂರು ಅಂಕಗಳಿಗೆ ನಡೆಯಲಿರುವ ಈ ಪರೀಕ್ಷೆಯಲ್ಲಿ ನೂರು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಉತ್ತರ ಬರೆಯಲು ಒಂದು ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಬ್ಯಾಂಕಿಂಗ್, ಕಂಪ್ಯೂಟರ್ ನಾಲೆಡ್ಜ್, ಪ್ರಸ್ತುತ ಆರ್ಥಿಕತೆಯ ಸ್ಥಿತಿ ಮತ್ತು ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಇದು ಒಳಗೊಂಡಿರುತ್ತದೆ. ಇದರಲ್ಲಿ ಅರ್ಹತೆ ಪಡೆದವರನ್ನು ವೈಯುಕ್ತಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಆಗಸ್ಟ್ ಎರಡನೇ ಅಥವಾ ಮೂರನೇ ವಾರ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ.

ಜೊತೆಗೆ ಸಂದರ್ಶನಕ್ಕೂ ನೂರು ಅಂಕ ನಿಗದಿಯಾಗಿರುತ್ತದೆ. ಸಾಮಾನ್ಯ ಮತ್ತು ಇಡಬ್ಲ್ಯುಎಸ್ ಅಭ್ಯರ್ಥಿಗಳು ಶೇ.50 ಮತ್ತು ಎಸ್‌ಸಿ/ಎಸ್‌ಟಿ/ ಓಬಿಸಿ ಅಭ್ಯರ್ಥಿಗಳು ಶೇ.45 ಅಂಕ ಪಡೆಯುವುದು ಕಡ್ಡಾಯವಾಗಿರುತ್ತದೆ.

ಮುಖ್ಯವಾಗಿ ನೇಮಕ ಪ್ರಕ್ರಿಯೆ ನಡೆಯುವಾಗ ಹುದ್ದೆಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಗೊಂಡವರು ದೇಶದ ಯಾವುದೇ ಭಾಗದಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕಿರುತ್ತದೆ. ಷರತ್ತುಗಳು ಅನ್ವಯ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ

 

ಇದನ್ನು ಓದಿ: Viral Video: ಬಿಳಿ ಸೊಂಟ ಬಿಡಲ್ಲ, ಕಪ್ಪು ಸೀರಿ ನಿಲ್ಲಲ್ಲ ! ಫೇರ್ ವೆಲ್ ದಿನ ಸೊಂಟ – ಸೀರೆಯ ಜುಗಲ್’ಬಂದಿ ! ವೀಡಿಯೋ ವೈರಲ್ !! 

2 Comments
  1. MichaelLiemo says

    ventolin capsule: Ventolin inhaler price – ventolin cost uk
    buy ventolin tablets online

  2. Timothydub says

    indian pharmacy online: cheapest online pharmacy india – reputable indian online pharmacy

Leave A Reply

Your email address will not be published.