Dakshina kannada: ಮಳೆಯ ಆರ್ಭಟಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Latest Dakshina kannada news MANGALURU heavy rain effect

Dakshina kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ(Dakshina kannada) ಮುಂದುವರೆದ ವರ್ಣನ ಆರ್ಭಟಕ್ಕೆ ಮೋರಿ ದಾಟುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಜಿಲ್ಲೆಯ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಮಳೆ ನೀರಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಆವರು ಅಲ್ಲಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಸುರೇಶ್ ಗಟ್ಟಿ ಅವರೇ ಮೃತ ದುರ್ದೈವಿ.

ವೃತ್ತಿಯಲ್ಲಿ ಪೇಂಟರ್ ಆಗಿದ್ದ ಅವರು ನಿನ್ನೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ ಕಾಲು ಜಾರಿದ್ದಾರೆ. ಅಲ್ಲಿಯೇ.ಮೋರಿಯ ಪಕ್ಕಾ ಮಳೆ ನೀರಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಮಾಹಿತಿ ಹಂಚಿಕೊಂಡಿದ್ದಾರೆ.

ಸುರೇಶ್ ಅವರನ್ನು ಅವರ ಪಕ್ಕದ ಮನೆಯ ಮಾಜಿ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯ ಪ್ರೇಮಾನಂದ ಮತ್ತು ಅವರ ಸಂಬಂಧಿ ಧನರಾಜ್ ಅವರು ಮೇಲಕ್ಕೆತ್ತಿ ಆಸ್ಪತ್ರೆ ಸಾಗಿಸುವಾಗಲೇ ಸುರೇಶ್ ಅವರು ಮೃತಪಟ್ಟಿದ್ದಾರೆ. ಮೃತ ಸುರೇಶ್ ಅವರ ಪತ್ನಿ ಬೀಡಿ ಕಟ್ಟುತ್ತಿದ್ದು, ಹಿರಿಯ ಮಗಳಿಗೆ ಇತ್ತೀಚೆಗಷ್ಟೆ ಮದುವೆ ಆಗಿತ್ತು. ಕಿರಿಯ ಮಗಳು ಅವಿವಾಹಿತಳಾಗಿದ್ದು ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ತಂದೆಯೇ ಅಕಾಲಿಕ ಮರಣವನ್ನಪ್ಪಿದ್ದು ಬಡ ಅಶಕ್ತ ಕುಟುಂಬಕ್ಕೆ ದಿಕ್ಕೇ ಕಾಣದಂತಾಗಿದೆ.

ಇದನ್ನೂ ಓದಿ: Gruha jyothi Scheme : ಹೀಗೆ ಮಾಡ್ಲಿಲ್ಲ ಅಂದ್ರೆ 100 ಯುನಿಟ್ ಕರೆಂಟ್ ಬಳಸಿದ್ರೂ ಬಿಲ್ ಕಟ್ಬೇಕು !! ‘ಗೃಹಜ್ಯೋತಿ’ಗೆ ಸರ್ಕಾರದಿಂದ ಹೊಸ ರೂಲ್ಸ್ !!

Leave A Reply

Your email address will not be published.