ದಕ್ಷಿಣ ಕನ್ನಡ: ನಾಳೆ, ಜುಲೈ 7 ರಂದು ಶಾಲೆ ಮತ್ತು ಸೀಮಿತ ಕಾಲೇಜುಗಳಿಗೆ ರಜೆ ಘೋಷಣೆ
Dakshina Kannada :ದ .ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆ(Dakshina Kannada)ಯಲ್ಲಿ ಜುಲೈ 7 ರ ಶುಕ್ರವಾರದಂದು ಶಾಲಾ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುತ್ತೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ, ಬುಧವಾರ, ಗುರುವಾರವೂ ದಿನವಿಡೀ ಮಳೆ ಸುರಿದಿದೆ. ಆ ಮೂರು ದಿನವೂ ರಜೆ ಘೋಷಿಸಲಾಗಿತ್ತು. ಶುಕ್ರವಾರವೂ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇರುವ ಕಾರಣ ಜಾಗರೂಕತೆಯ ದೃಷ್ಟಿಯಿಂದ ನಾಳೆ ಶುಕ್ರವಾರ ಜುಲೈರಂದು ಅಂಗನವಾಡಿಯಿಂದ ಪ್ರಾರಂಭವಾಗಿ ಪ್ರೌಢಶಾಲಾ ತನಕ ಎಲ್ಲರಿಗೂ ರಜೆ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ ಪ್ರಥಮ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ನಾಳೆ ರಜಾ.
ಪ್ರಮುಖವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಣೆಯಾಗಿರುತ್ತದೆ.. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ : ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ
ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ: 17 (7,2023 ರಂದು ರಜೆಯನ್ನು ಘೋಷಿಸಲಾಗಿದೆ.
2. ಗ್ರಾಮೀಣ / ದೂರ ಪ್ರದೇಶಗಳಿಂದ ಬರುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹಾಜರಾಗಲು ಅನಾನೂಕೂಲವಾಗುವ ಸಂದರ್ಭದಲ್ಲಿ ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾ ಸಂಸ್ಥೆಗಳು ಅವಕಾಶ ಕಲ್ಪಿಸುವುದು, 3.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು
4. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
5, ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು 6. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಹೊರದಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು,
7. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. 8, ಸಂಬಂಧಪಟ್ಟ ಇಲಾಖಾ ಅಧಿಕಾಧಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.
ಇದನ್ನೂ ಓದಿ :ಅತೀ ಶೀಘ್ರದಲ್ಲೇ ‘ಧರ್ಮಸ್ಥಳ ಫೈಲ್ಸ್’ ?400 ಕೊಲೆಗಳ ಹಿನ್ನೆಲೆಯ ಈ ಸಿನಿಮಾ ಯಾಕೆ ಬೇಕು ?