CM Siddaramaiah: 3 ಗಂಟೆಗೂ ಅಧಿಕ ಸಮಯ ಬಜೆಟ್ ಭಾಷಣ: ಮುಖ್ಯಮಂತ್ರಿಗಳಿಗೆ ಕಾಣಿಸಿಕೊಂಡ ವಿಪರೀತ ಕೆಮ್ಮು, ಬಹುತೇಕ ಕಾರ್ಯಕ್ರಮ ರದ್ದು

Latest news Most of the program is cancelled because CM Siddaramaiah coughed violently during the budget speech

CM Siddaramaiah: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಅಧಿವೇಶನದಲ್ಲಿ ಶುಕ್ರವಾರ ಸುಮಾರು 3 ಗಂಟೆಗಳ ಕಾಲ ಬಜೆಟ್ ಮಂಡನೆ ಮಾಡಿದ್ದು, ಈ ಪರಿಣಾಮ ಸಿದ್ದರಾಮಯ್ಯ (CM Siddaramaiah) ಅವರಿಗೆ ವಿಪರೀತ ಕೆಮ್ಮು ಕಾಣಿಸಿಕೊಂಡಿದೆ.

ಹೌದು, ರಾಜ್ಯದ ಬಜೆಟ್ ಮಂಡನೆ ಮಾಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಮ್ಮಿನಿಂದ ಬಳಲುತ್ತಿರುವ ಕಾರಣ ಶನಿವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ಮತ್ತೆ ಕೆಲವು ಕಾರ್ಯಕ್ರಮಗಳ ಪಟ್ಟಿಯನ್ನು ಬದಲಿಸಿಕೊಂಡಿದ್ದಾರೆ.

ಇನ್ನು ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಐಜಿಪಿ ಅಲೋಕ್ ಮೋಹನ್, ಇಂಟಲಿಜೆನ್ಸ್ ಮುಖ್ಯಸ್ಥ ಶರತ್ ಚಂದ್ರ ಸೇರಿದಂತೆ ಹಲವು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಇಂದು ಮುಖ್ಯಮಂತ್ರಿ ಜೊತೆಗೆ ಗ್ಯಾರಂಟಿ ಯೋಜನೆಗಳ ಜಾರಿ ಕುರಿತು ಹಲವು ಮಹತ್ವದ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಬಾಕಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಅಧಿಕಾರಿಗಳು ಚರ್ಚೆ ಮಾಡಲಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿ ಆಗಸ್ಟ್‌ 15ರಂದು ಅಥವಾ ಅದರ ಮರುದಿನ ಎಲ್ಲ ಫಲಾನುಭವಿ ಮಹಿಳೆಯರಿಗೆ 2,000 ಹಣ ನೀಡುವ ಮಾಡುವ ಬಗ್ಗೆ ಚರ್ಚೆ ಮಾಡಲಿದ್ದಾರೆ. ಉಳಿದಂತೆ ಅನ್ನಭಾಗ್ಯ ಯೋಜನೆಗೆ 5 ಕೆ.ಜಿ. ಅಕ್ಕಿ ಹಾಗೂ 5 ಕೆ.ಜಿ ಅಕ್ಕಿಯ ಬದಲಾಗಿ ತಲಾ 34 ರೂ.ನಂತೆ ಒಟ್ಟು 170 ರೂ. ಹಣವನ್ನು ನೀಡಲು ಸರ್ಕಾರ ಆದೇಶ ಹೊರಡಿಸಿದ್ದು, ಹಣ ಹಂಚಿಕೆ ಬಗ್ಗೆಯೂ ಅಂತಿಮ ಚರ್ಚೆ ಮಾಡಲಾಗುತ್ತಿದೆ.

ಇನ್ನು ರಾಜ್ಯದ ಪ್ರತಿಷ್ಠಿತ ಸರ್ಕಾರಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ (ಎಲ್ಲ ಬಿಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ತಲಾ 10 ಕೆ.ಜಿ. ಅಕ್ಕಿ ವಿತರಣೆ) ಬಗ್ಗೆ ಧ್ವನಿ ಮುದ್ರಣ ಮಾಡಲಾಗುತ್ತಿದೆ. ಕೆಮ್ಮಿನ ಕಾರಣ ದೀರ್ಘವಾಗಿ ಮಾತನಾಡಲು ಸಾಧ್ಯವಿಲ್ಲವೆಂದು ಕಾರ್ಯಕ್ರಮಗಳಿಂದ ದೂರ ಉಳಿದಿದ್ದಾರೆ. ಆದರೆ, ಅನ್ನಭಾಗ್ಯ ಯೋಜನೆ ಬಗ್ಗೆ ಸಿಎಂ ನಿವಾಸದಲ್ಲೇ ರೆಕಾರ್ಡಿಂಗ್ ನಡೆಸಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡುವಂತೆ ಈಗಾಗಲೇ ಎಲ್ಲ ಒಕ್ಕೂಟಗಳಿಂದಲೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಪ್ರಸ್ತುತ ಇರುವ ಹಾಲಿನ ದರಕ್ಕಿಂತ ಕನಿಷ್ಠ 5 ರೂ. ಹಾಲಿನ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿವೆ. ಈ ಕುರಿತು ಮಂಗಳವಾರ ಹಾಲಿನ ದರ ಏರಿಕೆ ಕುರಿತು ಸಭೆ ನಡೆಯಲಿದ್ದು, ಈ ಕುರಿತು ಯಾವ ತೀರ್ಮಾನ ಕೈಗೊಳ್ಳಬೇಕು ಎಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಿದ್ದಾರೆ.

 

ಇದನ್ನು ಓದಿ: White hair: ಹೇರ್ ಡೈ ಮಾಡೋ ಅಗತ್ಯವೇ ಇಲ್ಲ: ಈ ತರಕಾರಿಗಳ ಪೇಸ್ಟ್ ಬಳಸಿ – ಇದ್ದಿಲು ಕಪ್ಪಿಗಿಂತಲೂ ಕಡು ಕೂದಲು ನಿಮ್ಮದಾಗಿಸಿ 

Leave A Reply

Your email address will not be published.