Traffic Fine: ವಾಹನ ಸವಾರರೇ, ದಂಡ ಪಾವತಿ ಕುರಿತು ಇಲ್ಲಿದೆ ಗುಡ್ ನ್ಯೂಸ್ ; ಸರ್ಕಾರದಿಂದ ಮಹತ್ವದ ಘೋಷಣೆ !

Latest news important announcement by the government on payment of Traffic fines

Traffic Fine: ವಾಹನ ಸವಾರರೇ ನಿಮಗೆ ಮತ್ತೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ದಂಡ ಪಾವತಿ ಕುರಿತು ಸಿಹಿಸುದ್ದಿ‌. ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು (Traffic Fine) ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಸಂಚಾರಿ ಪೊಲೀಸ್‌ ಇಲಾಖೆಯ ಇ ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಬಾಕಿ ಪ್ರಕರಣಗಳಿಗೆ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ. ಹಾಗೇ ಈ ರಿಯಾಯಿತಿಯು 09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ರಿಯಾಯಿತಿ ದರದಲ್ಲಿ ದಂಡ ಪಾವತಿ ಹೇಗೆ ?!

ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಮೊಬೈಲ್ ಅಪ್ಲಿಕೇಶನ್
ಮೂಲಕ ದಂಡ ಪಾವತಿ ಮಾಡಬಹುದು. ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ದಂಡ ಪಾವತಿಸಬಹುದಾಗಿದೆ. ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ವೆಬ್ ಸೈಟ್ ಗೆ ಲಾಗ್ ಇನ್ ಆಗಿ ವಾಹನದ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಬಾಕಿ ಪಾವತಿ ಮಾಡಬಹುದು.

ಪೇಟಿಎಂ ಅಪ್ಲಿಕೇಶನ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದು. ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ, ದಂಡವನ್ನು ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬಹುದು.

 

ಇದನ್ನು ಓದಿ: Marriage: ದೇವಾಲಯದಲ್ಲಿ ಹಿಂದೂ ಜೋಡಿಗೆ ಮದುವೆ ಮಾಡಿಸಿದ ಮುಸ್ಲಿಂ ಲೀಗ್ ; ಹಿಂದೂ-ಮುಸ್ಲಿಂ ಭಾಂದವ್ಯಕ್ಕೆ ಸಾಕ್ಷಿಯಾಯ್ತು ವಿವಾಹ ! 

Leave A Reply

Your email address will not be published.