Weather Report: ರಾಜ್ಯದಲ್ಲಿನ್ನೂ ಒಂದು ವಾರ ಎಡೆ ಬಿಡದೆ ಕಾಡಲಿದೆ ಮಳೆ ಅಬ್ಬರ !! ಬೆಂಗಳೂರು ಸೇರಿ ಕರಾವಳಿಗೆ ಕಟ್ಟೆಚ್ಚರ !!

latest news Weather Report Mangalore along with Bengaluru is alerted by the weather department

Weather Report: ಕರಾವಳಿ ಹಾಗೂ ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report ) ನೀಡಿದೆ. ಇನ್ನು ರಾಜಧಾನಿ
ಬೆಂಗಳೂರಿನಲ್ಲಿ ಸೂರ್ಯ ಮರೆಯಾಗಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 24 ಗಂಟೆಯೊಳಗೆ ಬೀದರ್, ಕಲಬುರಗಿ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕೆಲವು ಕಡೆ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಯ ಬೆಳಗಾವಿ, ಬಳ್ಳಾರಿಯಲ್ಲಿ ಮಾತ್ರ ಮಳೆ ಅಬ್ಬರ ಇರಲಿದೆ, ಈ ಉಳಿದ ಜಿಲ್ಲೆಗಳಲ್ಲಿ ಮುಂಗಾರು ಮಳೆ ದುರ್ಬಲವಾಗಿದೆ.

ಪ್ರಮುಖ ನಗರಗಳಲ್ಲಿ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್) ಕಲಬುರಗಿ: 37 ಡಿ.ಸೆ – 23 ಡಿ.ಸೆ
ಗದಗ: 31 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ ಬೆಳಗಾವಿ:27 ಡಿ. ಸೆ – 21 ಡಿ.ಸೆ ಕಾರವಾರ: 31 ಡಿ.ಸೆ – 25 ಡಿ.ಸೆ ಮಂಗಳೂರು: 29 ಡಿ.ಸೆ – 24 ಡಿ.ಸೆ ಹೊನ್ನಾವರ: 29 ಡಿ.ಸೆ- 24 ಡಿ.ಸೆ ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ ಇರಲಿದೆ.

ಮುಖ್ಯವಾಗಿ ಜು.16ರವರೆಗೆ ಕರಾವಳಿ ಜಿಲ್ಲೆಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮತ್ತು ಜಿಲ್ಲೆಯಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

 

ಇದನ್ನು ಓದಿ: Plane Crash: ನೇಪಾಳ ವಿಮಾನ ನಾಪತ್ತೆ ; ಕೊನೆಗೂ ಪತ್ತೆಯಾದ ಅವಶೇಷ- 6 ಮಂದಿಯ ದುರಂತ ಅಂತ್ಯ !

Leave A Reply

Your email address will not be published.