Government Employees: ಸರ್ಕಾರಿ ನೌಕರರಿಗೆ ಭರ್ಜರಿ ಹೆಲ್ತ್ ನ್ಯೂಸ್, ಕ್ಯಾಷ್ ಲೆಸ್ ಇನ್ಶೂರೆನ್ಸ್ ಜಾರಿ !

state government has implemented 'Karnataka Arogya Sanjeevini Yojana' for Government Employees

Government employees: ರಾಜ್ಯ ಸರಕಾರವು ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)’ ಜಾರಿ ಮಾಡಿದ್ದು, ಈ ಯೋಜನೆಯಡಿ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ನಿರ್ಧರಿಸಿದೆ. ಇದೀಗ ಈ ಯೋಜನೆಯ ಲಾಭ ಶೀಘ್ರದಲ್ಲೇ ನೌಕರರಿಗೆ (Govt Employees News) ಲಭ್ಯವಾಗಲಿದೆ.

2021ರ ಜುಲೈ 22 ರಂದು ಕರ್ನಾಟಕ ರಾಜ್ಯ ಸಚಿವ ಸಮಿತಿ ಕರ್ನಾಟಕ ಆರೋಗ್ಯ ಸಂಜೀವನಿ ಯೋಜನೆ (ಕೆಎಎಸ್ಎಸ್) ಅನುಷ್ಠಾನಕ್ಕೆ ಅನುಮೋದನೆ ನೀಡಿತು. ಈ ಯೋಜನೆಯನ್ನು ಈ ಹಿಂದೆ ಕರ್ನಾಟಕ ಬಜೆಟ್ 2021 ರಲ್ಲಿ ಘೋಷಿಸಲಾಗಿತ್ತು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ, ರಾಜ್ಯ ಸರ್ಕಾರಿ ನೌಕರರು( Government employees) ಮತ್ತು ಅವರ ಕುಟುಂಬ ಸದಸ್ಯರಿಗೆ ಸರ್ಕಾರವು ಹಣವಿಲ್ಲದ ವೈದ್ಯಕೀಯ ಚಿಕಿತ್ಸೆಯನ್ನು ನೀಡಲಿದೆ.

ಈ ಯೋಜನೆಯ ಲಾಭ ಪಡೆಯಲು ʻಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆಯʼ (HRMS) ವೆಬ್‌ಸೈಟ್‌ನಲ್ಲಿ, ನೌಕರರು ತಮ್ಮ ಮತ್ತು ಅವಲಂಬಿತರ ಮಾಹಿತಿಯನ್ನು ನವೀಕರಣ ಮಾಡಿಸಬೇಕೆಂದು ಸರ್ಕಾರ ಸೂಚಿಸಿದೆ. ಅಲ್ಲದೆ ಈ ಮಾಹಿತಿಯನ್ನು ಕಚೇರಿಗೆ ಸಹ ಸಲ್ಲಿಸಬೇಸಬೇಕಿರುತ್ತದೆ ಎಂದು ನೌಕರರಿಗೆ ತಿಳಿಸಲಾಗಿದೆ.

ಕಳೆದ ಮಾರ್ಚ್‌ನಲ್ಲಿ ಸರ್ಕಾರವು ಪರಿಷ್ಕೃತ ಕಾರ್ಯನೀತಿಯನ್ನು ಪ್ರಕಟಣೆ ಮಾಡಿ ಈ ಯೋಜನೆಗೆ ಚಾಲನೆ ನೀಡಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ. ಈಗ ಸಮಸ್ಯೆ ಬಗೆಹರಿದಿದ್ದು, ತ್ವರಿತಗತಿಯಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ನೌಕರರ ಮಾಹಿತಿ ಸಂಗ್ರಹ ಸಂಪೂರ್ಣವಾಗುತ್ತಿದ್ದಂತೆಯೇ ಕಾರ್ಡ್‌ ರೂಪಿಸುವ ಪ್ರಕ್ರಿಯೆ ಆರಂಭವಾಗಲಿದೆ. ಎಂದು ತಿಳಿದುಬಂದಿದೆ.

ಈ ಯೋಜನೆಯ ಲಾಭವನ್ನು ಪಡೆಯಲು ಯಾರೆಲ್ಲ ಅರ್ಹರು?
ಈ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲ ತಾಯಿಯ ನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ- ಕನಿಷ್ಠ ಕುಟುಂಬ ಪಿಂಚಣಿ ರೂ.8500 ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ, ಹಾಗೂ ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡಂತೆ) ಇವರೆಲ್ಲಾ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಲು ಅರ್ಹರಾಗಿರುತ್ತಾರೆ.

 

ಇದನ್ನು ಓದಿ: ಕಡಬ: ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಯುವ ಬ್ರಿಗೇಡ್‌ನಿಂದ ಸರ್ಕಾರಕ್ಕೆ ಮನವಿ

Leave A Reply

Your email address will not be published.