CM Siddaramaiah: ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್ !! ಸದ್ಯಕ್ಕೆ ಈ ಯೋಜನೆ ಜಾರಿ ಇಲ್ಲ ಎಂದ ಸರ್ಕಾರ !!

Latest news CM Siddaramaiah government said that this project is not implemented at present

ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ(Cabinet Minister meeting) ಹೊಸ ಪಿಂಚಣಿ ಯೋಜನೆ ರದ್ದು ಮಾಡಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನವನ್ನು ಕೈಗೊಳ್ಳುತೇವೆ ಎಂದು ಭರವಸೆ ಕೊಟ್ಟಿದ್ದ ಸರ್ಕಾರ ಇದೀಗ ಉಲ್ಟಾ ಹೊಡೆದಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಶಾಕ್ ನೀಡಿದೆ.

ಹೌದು, ರಾಜ್ಯ ಕಾಂಗ್ರೆಸ್ ಸರ್ಕಾರ ( Congress Government ) ಚುನಾವಣಾ ಪೂರ್ವದಲ್ಲಿ ಹಲವಾರು ಭರವಸೆಗಳನ್ನು ನೀಡಿದ್ದು, ಅದರಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಬಹುದಿನದ ಬೇಡಿಕೆ ಹೊಸ ಪಿಂಚಣಿ ಯೋಜನೆಯನ್ನು ( New Pension Scheme – NPS ) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ( Old Pension Scheme – OPS) ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಆದ್ರೇ ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ನಿರ್ಧರಿಸಿಲ್ಲ ಎಂಬುದಾಗಿ ತಿಳಿಸಿದೆ. ಈ ಮೂಲಕ OPS ಜಾರಿ ನಿರೀಕ್ಷೆಯಲ್ಲಿದ್ದಂತ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಲಾಗಿದೆ.

ಅಂದಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಕಳೆದ ವಾರವಷ್ಟೇ ಮಂಡಿಸಿದ ರಾಜ್ಯ ಬಜೆಟ್‌ ರಾಜ್ಯದ ಸರ್ಕಾರಿ ನೌಕರರಿಗೆ ನಿರಾಸೆ ಮೂಡಿಸಿತ್ತು. ಬಜೆಟ್‌ನಲ್ಲಿ 7ನೇ ವೇತನ ಆಯೋಗದ ವರದಿಯನ್ನು (7th Pay Commission) ಜಾರಿಗೊಳಿಸಲು ಅಗತ್ಯವಾಗಿರುವ ಅನುದಾನ ಕಾಯ್ದಿರಿಸಿರಲಿಲ್ಲ. ಅಂತೆಯೇ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (NPS) ರದ್ಡು ಪಡಿಸಿ ಹಳೇ ಪಿಂಚಣಿ ಯೋಜನೆಯನ್ನು (OPS) ಜಾರಿಗೆ ತರುವ ಕುರಿತು ಯಾವುದೇ ತೀರ್ಮಾನವನ್ನೂ (Govt Employees News) ಪ್ರಕಟಿಸಿರಲಿಲ್ಲ. ಆದರೆ ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ ಎಂದು ಸಿಎಂ ಹೇಳಿದ್ದ ಮಾತಿನ ಮೇಲೆ ನೌಕರರು ಭರವಸೆ ಇಟ್ಟುಕೊಂಡು ಕರೆಯುತ್ತಿದ್ದರು. ಆದರೀಗ ಅದಕ್ಕೂ ತಣ್ಣೀರೆರಚಿದಂತಾಗಿದೆ.

ನಿನ್ನೆ ದಿನ ವಿಧಾನಪರಿಷತ್ ನಲ್ಲಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಅವರು ಈ ಕುರಿತಂತೆ ಪ್ರಶ್ನೆ ಕೇಳಿದ್ದು, ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಹಳೇ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿಯೇ ಇಲ್ಲ ಎಂದು ಉತ್ತರಿಸಿದ್ದಾರೆ. ಅಲ್ಲದೆ ದಿನಾಂಕ 01-03-2023ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ NPS ಯೋಜನೆಯಡಿ ಇರುವ ಸರ್ಕಾರಿ ನೌಕರರು ( Government Employees ) ಎಷ್ಟು ಎಂಬುದಕ್ಕೆ ಉತ್ತರಿಸಿರುವಂತ ಸಿಎಂ ದಿನಾಂಕ- 24-06-2023ಕ್ಕೆ ಇದ್ದಂತೆ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಂಖ್ಯೆ 3,04,511. ಇದು ಸ್ವಾಯತ್ತ ಸಂಸ್ಥೆಯ ನೌಕರರು ಒಳಗೊಂಡಂತ ಸಂಖ್ಯೆ ಆಗಿದೆ ಎಂಬುದಾಗಿ ತಿಳಿಸಿದ್ದಾರೆ.

ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಎನ್‌ಪಿಎಸ್‌ ರದ್ದು:
ಈ ಹಿಂದೆ ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ(Shantaram teja) ಅವರು ಮಾತನಾಡಿ ರಾಜಾಸ್ತಾನ, ಛತ್ತೀಸ್ ಗಡದಲ್ಲಿ ಎನ್.ಪಿ.ಎಸ್ ರದ್ದಾಗಿದೆ. ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ ಎನ್.ಪಿ.ಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19000 ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ದೊರೆಯಲಿದೆ. ನೌಕರರ ಪಾಲಿನ 9,000 ಕೋಟಿ ರೂಪಾಯಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10,000 ಕೋಟಿ ರೂಪಾಯಿ ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದರು.

 

ಇದನ್ನು ಓದಿ: Intresting news: ಆರ್ಮಿಯೇ ಮುಗಿಬಿದ್ದು ಕೊಳ್ಳುವ ಈ ಕಾರಿನ ಪವರ್ ಏನು ಗುರೂ?: 130 ಕುದುರೆ ಶಕ್ತಿಗೂ ಜಗ್ಗದ ಈ ಕಪ್ಪುಕುದುರೆ ಯಾವುದು ಗೊತ್ತಾ ?

Leave A Reply

Your email address will not be published.