Anna bhagya Scheme: ಅನ್ನಭಾಗ್ಯದ ಬಗ್ಗೆ ಸಚಿವ ಕೆ ಹೆಚ್ ಮುನಿಯಪ್ಪ ಕೊಟ್ರು ಬಿಗ್ ಅಪ್ಡೇಟ್ ; ಅಕ್ಕಿ ಬದಲು ಹಣ ನೀಡುತ್ತಿರುವುದು ತಾತ್ಕಾಲಿಕ ?
Lates news Anna bhagya scheme Minister KH Muniappa said that giving money instead of rice is temporary
Anna bhagya: ಕಾಂಗ್ರೆಸ್ (congress) ಪಕ್ಷ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಳ್ಳುತ್ತಿದೆ. ಇದೀಗ ಕರ್ನಾಟಕ ಸರಕಾರವು ಅನ್ನಭಾಗ್ಯ (Anna bhagya) ಯೋಜನೆ ಜಾರಿ ತರಲು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಹಣವನ್ನು ನೀಡಲು ಮುಂದಾಗಿದೆ. ಸದ್ಯ ಅನ್ನಭಾಗ್ಯದ ಬಗ್ಗೆ ಸಚಿವ ಕೆ. ಹೆಚ್ ಮುನಿಯಪ್ಪ ಅವರು ಬಿಗ್ ಅಪ್ಡೇಟ್ ನೀಡಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುತ್ತಿರುವುದು ತಾತ್ಕಾಲಿಕ ಮಾತ್ರ. ಮುಂದಿನ ದಿನಗಳಲ್ಲಿ ಪರ್ಯಾಯ ಮಾರ್ಗಗಳಿಂದ ಅಕ್ಕಿ ಖರೀದಿಸಿ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿ ಜೊತೆಗೆ ಇನ್ನೂ 5 ಕೆಜಿ ಸೇರಿಸಿ 10 ಕೆಜಿ ನೀಡಲಿದ್ದೆವು. ಆದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಲಿಲ್ಲ. ಹಾಗಾಗಿ ಸದ್ಯಕ್ಕೆ ಜನರಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತದೆ ಎಂದರು.