KSRTC Bus purchase: ಫ್ರೀ ಬಸ್ ಜಾರಿ ಬಳಿಕ ಮಹಿಳೆಯರಿಗೆ ಗುಡ್ ನ್ಯೂಸ್ ಮೇಲೆ ಗುಡ್ ನ್ಯೂಸ್ !! ಮತ್ತೊಂದು ಮಹತ್ವದ ಕಾರ್ಯಕ್ಕೆ ಮುಂದಾದ ಸರ್ಕಾರ !!
Latest Karnataka political news purchase of KSRTC four thousand buses to solve the shortage of bus Karnataka chief minister Siddaramaiah
KSRTC Bus purchase: ರಾಜ್ಯ ಸರ್ಕಾರದ(State Government) ಪಂಚ ಗ್ಯಾರಂಟಿ ಗಳ ಪೈಕಿ ಶಕ್ತಿ ಯೋಜನೆಯೂ ಒಂದು. ಈ ಶಕ್ತಿ ಯೋಜನೆಯ ಪೂರ್ಣ ಲಾಭ ಮಹಿಳೆಯರಿಗೆ ತಲುಪಲು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಬಸ್ಸು ಕೊರತೆ ನೀಗಿಸಲು 4 ಸಾವಿರ ಹೊಸ ಬಸ್ಸು ಖರೀದಿ(Bus purchase) ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM siddaramaiah)ಹೇಳಿದ್ದಾರೆ.
ಹೌದು, ಶಕ್ತಿ ಯೋಜನೆಯನ್ನು(Shakthi yojane)ರಾಜ್ಯದ ಮಹಿಳೆಯರು ಖುಷಿಯಿಂದ ಸ್ವಾಗತಿಸಿದ್ದು, ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ ಬಂದಿದೆ. ಇದಕ್ಕಾಗಿ ಸರ್ಕಾರವು 4 ಸಾವಿರ ಹೊಸ ಬಸ್ಸು ಖರೀದಿಗೆ(KSRTC Bus purchase) ಮುಂದಾಗಿದೆ. ಹಾಗೂ ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ನೇಮಕ ಮಾಡಲು ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ನಿನ್ನೆ ದಿನ ವಿಧಾನಪರಿಷತ್(Vidhanaparishath) ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದುವರೆಗೆ ಶಕ್ತಿ ಯೋಜನೆಯ ಮೂಲಕ ಉಚಿತವಾಗಿ 18 ಕೋಟಿ ಮಹಿಳೆಯರು ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ, ಪುರುಷರಿಗೆ ತೊಂದರೆಯಾಗುತ್ತಿದೆ ಎಂದು ಬಿಜೆಪಿ(BJP)ಯವರು ಟೀಕಿಸಿದ್ದಾರೆ. ಸರ್ಕಾರದ ಯೋಜನೆ ವಿರೋಧಿಸಬೇಕು ಎಂದು ಅನಗತ್ಯವಾಗಿ ವಿರೋಧಿಸುವುದಲ್ಲ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 13 ಸಾವಿರ ಜನ ಕಂಡಕ್ಟರ್, ಸಾರಿಗೆ ಸಿಬ್ಬಂದಿ ನೇಮಕ ಮಾಡಲು ನಿರ್ಧರಿಸಿದ್ದೇವೆ. 4000 ಬಸ್ ಖರೀದಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.
ಅಲ್ಲದೆ ಶಕ್ತಿ ಯೋಜನೆಯ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರೂ(Veerendra heggade)ಪತ್ರ ಬರೆದು ಶಕ್ತಿ ಯೋಜನೆ ಜಾರಿ ಮಾಡಿದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಮುಖ್ಯಮಂತ್ರಿಗಌ ಹೆಸರಲ್ಲಿ ಅರ್ಚನೆ ಮಾಡಿಸುತ್ತಿದ್ದಾರೆ, ಹರಕೆ ಒಪ್ಪಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ಶಕ್ತಿ ಯೋಜನೆಯ ಯಶಸ್ಸಿಗೆ ಉದಾಹರಣೆ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಲಾಭ:
ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿದ ಬಳಿಕ ರಾಜ್ಯ ಸಾರಿಗೆ ನಿಮದ ಆದಾಯ ಹೆಚ್ಚಾಗಿದೆ ಎಂದು ಹೇಳಿದ ಮುಖ್ಯಮಂತ್ರಿಗಳು ‘ಮಹಿಳೆಯರ ಉಚಿತ ಬಸ್ ಪ್ರಯಾಣದಿಂದಾಗಿ(Free bus travel)ಧಾರ್ಮಿಕ, ಪ್ರೇಕ್ಷಣಿಯ ಸ್ಥಳಗಳಿಗೆ ಜನರ ಭೇಟಿ ಹೆಚ್ಚಾಗುತ್ತದೆ ಇದರಿಂದ ಪ್ರವಾಸೋದ್ಯಮ, ಉದ್ಯೋಗ ಹೆಚ್ಚಾಗುತ್ತಿದೆ. ಒಂದು ದಿನಕ್ಕೆ 49.6 ಲಕ್ಷ ಪ್ರಯಾಣಿಸುತ್ತಿದ್ದಾರೆ. 28 ಕೋಟಿ 94 ಲಕ್ಷ , 4.72 ಕೋಟಿ ರೂ. ದಿನಕ್ಕೆ ಆದಾಯ ಜಾಸ್ತಿಯಾಗಿದೆ’ ಎಂದು ಹೇಳಿದರು.