Dakshina Kannada: ಯಮನ ಉರುಳಾದ ಉಯ್ಯಾಲೆ: ಜೋಕಾಲಿ ಜೀಕುವಾಗ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು !

Share the Article

Dakshina Kannada: ಇಂದು ಭಾನುವಾರವಾಗಿದ್ದು, ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲಿ ಆಟ ಆಡುತ್ತಿದ್ದಾಗ ಸತ್ತುಹೋಗಿದ್ದಾನೆ. ಆಕೆ ಉಯ್ಯಾಲೆಯಲ್ಲಿ ಜೀಕುತ್ತಿದ್ದಾಗ ಆಕಸ್ಮಿಕವಾಗಿ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ (Belthangadi) ತಾಲೂಕಿನಲ್ಲಿ ನಡೆದಿದೆ.

ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಈ ದುರ್ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ಎಂಬಲ್ಲಿಯ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ, 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಶ್ರೀಷಾ ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ. ಆಗ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ನೆಲಕ್ಕೆ ಬಿದ್ದಿದ್ದಾನೆ.

ಘಟನೆಯನ್ನು ಕಂಡ ಆತನ ತಂಗಿ ಓಡಿ ಹೋಗಿ ತನ್ನ ತಂದೆಗೆ ವಿಷಯ ತಿಳಿಸಿದ್ದಾಳೆ. ತಕ್ಷಣ ಆತನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ವೇಳೆ ದಾರಿ ಮಧ್ಯೆಯೇ ಆತ ಸಾವನ್ನಪ್ಪಿದ ಘಟನೆ ಇಂದು, ಜುಲೈ 16 ರಂದು ಸಂಜೆ ನಡೆದಿದೆ.

ಇದೀಗ ಬಾಲಕನ ಶವವನ್ನು ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿ ಘಟನಾ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ :ಮಚ್ಚಿನ ಜತೆ ಮಲಗುತ್ತಿದ್ದ ಪತಿ !ಕೊನೆಗೂ ಊಹಿಸದ ದುರಂತ ನಡೆದೇ ಹೋಯ್ತು !

Leave A Reply