Gruhalakshmi Scheme : ‘ಗೃಹಲಕ್ಷ್ಮೀ’ ನಿರೀಕ್ಷೆಯಲ್ಲಿರೋ ‘ಯಜಮಾನಿ’ಯರಿಗೆ ಬಿಗ್ ಶಾಕ್ !! ಕೊನೇ ಕ್ಷಣದಲ್ಲಿ ಇಂತವರಿಗೆ 2000 ಇಲ್ಲ ಎಂದ ಸರ್ಕಾರ !!

Latest Karnataka news Congress guarantee gruhalakshmi scheme new conditions

Gruhalakshmi Scheme condition : ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ(Gruhalakshmi)ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ತಿಂಗಳು 19 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಆಗಸ್ಟ್ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಹಣವೂ ಬರಲಿದೆ. ಆದರೆ ಈ ಸಿಹಿ ಸುದ್ದಿ ಬೆನ್ನಲ್ಲೇ, ರಾಜ್ಯ ಸರ್ಕಾರವೀಗ ಹಣದ ನಿರೀಕ್ಷೆಯಲ್ಲಿರುವ ಯಜಮಾನಿಯರಿಗೆ ಶಾಕ್ ನೀಡಿದೆ.

ಹೌದು, ಬೆಂಗಳೂರಿನಲ್ಲಿ(Bangalore)ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಅವರು ಜು.17 ರಂದು (ಸೋಮವಾರ) ಗೃಹಲಕ್ಷ್ಮಿ ಯೋಜನೆ ಆ್ಯಪ್‌ಗೆ ಚಾಲನೆ ನೀಡಲಾಗುವುದು. ಜು.19 ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ಇದರೊಂದಿಗೆ ಈ ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು, ಯಾರು ಅರ್ಹರಲ್ಲ ಎಂಬುದನ್ನೂ( Gruhalakshmi Scheme condition) ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು..?
1) ಪಡಿತರ ಚೀಟಿಯಲ್ಲಿ(Ration card)ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ.
2) ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರತಕ್ಕದ್ದಲ್ಲ.

ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವಿಲ್ಲ:
ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಒಂದು ವೇಳೆ ನಿಗದಿತ ದಿನಾಂಕ, ಸಮಯಕ್ಕೆ ನೋಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೆ ಮುಂದೆ ಯಾವುದೇ ದಿನಾಂಕ ಅಥವಾ ಸಮಯದಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಸಚಿವೆ ಹೇಳಿದ್ದಾರೆ.

 

KSRTC Bus purchase: ಫ್ರೀ ಬಸ್ ಜಾರಿ ಬಳಿಕ ಮಹಿಳೆಯರಿಗೆ ಗುಡ್ ನ್ಯೂಸ್ ಮೇಲೆ ಗುಡ್ ನ್ಯೂಸ್ !! ಮತ್ತೊಂದು ಮಹತ್ವದ ಕಾರ್ಯಕ್ಕೆ ಮುಂದಾದ ಸರ್ಕಾರ !!

Leave A Reply

Your email address will not be published.