Gruhalakshmi Scheme: ‘ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಹಾಕುವುದು ಹೇಗೆ ಗೊತ್ತಾ..? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್
Latest Karnataka news Congress guarantee how to apply for gruhalakshmi scheme complete details in Kannada
Apply for Gruhalakshmi Scheme: ರಾಜ್ಯ ಸರಕಾರದ(Sate Government)ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ(Gruha lakshmi) ಯೋಜನೆ ಜಾರಿಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 19 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಹೀಗಾಗಿ ಅರ್ಜಿ ಸಲ್ಲಿಸುವುದು( Apply for Gruhalakshmi Scheme) ಹೇಗೆ? ಎಲ್ಲಿ ನೊಂದಾವಣಿ ಮಾಡುವುದು ಎಂಬುದರ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಯೋಜನೆಯಡಿ ನೋಂದಾಯಿಸಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ನೀಡಬೇಕು. ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲೆ ಆ ಬ್ಯಾಂಕ್ ಖಾತೆಯ ಪಾಸ್ ಬುಕ್ ನೀಡಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
• ರೇಷನ್ ಕಾರ್ಡ್ನಲ್ಲಿ(Ration card) ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್‌ಎಂಎಸ್(SMS) ಮೂಲಕ ರವಾನೆ ಮಾಡಲಾಗುವುದು.
• ‘ಗೃಹಲಕ್ಷ್ಮೀ’ಯೋಜನೆಯ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಬೇಕಾಗಿರುತ್ತದೆ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ(Bank account)ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ. ಗ್ರಾಮ ವನ್, ಬಾಪೂಜಿ ಕೇಂದ್ರ, ಕರ್ನಾಟಕ ವನ್, ಬೆಂಗಳೂರು ವನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.
ಎಲ್ಲೆಲ್ಲಿ ನೊಂದಾವಣಿ ಮಾಡಬಹುದು?
• ಗ್ರಾಮ ವನ್, ಬಾಪೂಜಿ ಕೇಂದ್ರ, ಕರ್ನಾಟಕ ವನ್, ಬೆಂಗಳೂರು ವನ್ ಕೇಂದ್ರಗಳಲ್ಲಿ ನೊಂದಾವಣಿ ಮಾಡಬಹುದು. ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.
• ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಹಾಕಬಹುದು.
ಪ್ರಜಾ ಪ್ರತಿನಿಧಿಗಳ ನೇಮಕ:
ಅರ್ಜಿ ಹಾಕುವ ವೇಳೆ ಉಂಟಾಗುವ ಒತ್ತಡ ತಪ್ಪಿಸಲು ಹಾಗೂ ಅರ್ಜಿದಾರರಿಗೆ ಅನುಕೂಲದ ದೃಷ್ಠಿಯಿಂದ, ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ‘ಪ್ರಜಾ ಪ್ರತಿನಿಧಿ’ಯನ್ನ ಸರ್ಕಾರ ನೇಮಿಸಿದೆ. ಈ ಪ್ರಜಾ ಪ್ರತಿನಿಧಿಗಳು, ಯೋಜನೆಗೆ ಅರ್ಜಿ ಸಲ್ಲಿಸಲು ತಂತ್ರಜ್ಞಾನ ಅಡೆತಡೆ ಎದುರಿಸುತ್ತಿರುವವರಿಗೆ ಸಹಾಯ ಮಾಡುತ್ತಾರೆ ಎಂದು ಸರ್ಕಾರ ಹೇಳಿದೆ. ಇನ್ನು ಪ್ರಜಾ ಪ್ರತಿನಿಧಿಗಳು ಫಲನುಭವಿಗಳ ಮನೆಗೆ ಭೇಟಿ ನೀಡಿ, ನಾಗರಿಕರ ಪರವಾಗಿ ಅರ್ಜಿ ಸಲ್ಲಿಸುತ್ತಾರೆ. ಇನ್ನು ಇದಕ್ಕಾಗಿ ಅವ್ರಿಗೆ ಯಾವುದೇ ಶುಲ್ಕ ಪಾವತಿಸಬೇಕಿಲ್ಲ ಎಂದು ಸ್ಪಷ್ಟ ಪಡೆಸಿದೆ.
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವಿಲ್ಲ:
ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಒಂದು ವೇಳೆ ನಿಗದಿತ ದಿನಾಂಕ, ಸಮಯಕ್ಕೆ ನೋಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೆ ಮುಂದೆ ಯಾವುದೇ ದಿನಾಂಕ ಅಥವಾ ಸಮಯದಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಸಚಿವೆ ಹೇಳಿದ್ದಾರೆ.
ಸಹಾಯವಾಣಿ:
ಫಲಾನುಭವಿಯು ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಗೆ 1902 ಸಂಖ್ಯೆಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್ ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು. ನಿಗದಿಪಡಿಸಿದ ದಿನಾಂಕದಂದು ನೋಂದಣಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ.