Basavaraj bommai : ಕೊನೆಗೂ BJP-JDS ಮೈತ್ರಿಗೆ ಬಿತ್ತು ಮುದ್ರೆ?! ಮಹತ್ವದ ಹೇಳಿಕೆ ಕೊಟ್ಟ ಮಾಜಿ ಸಿಎಂ ಬೊಮ್ಮಾಯಿ!!

Latest Karnataka political news BJP jds aliance for Lok sabha elections former CM Basavaraj bommai

Basavaraj bommai: ವಿಧಾನಸಭಾ ಚುನಾವಣೆಯ(Assembly election) ಹೀನಾಯ ಸೋಲಿನ ಬೆನ್ನಲ್ಲೇ ಬಿಜೆಪಿಯು(BJP) ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿ ಸೇಡು ತೀರಿಸಿಕೊಳ್ಳಲು ಜೆಡಿಎಸ್​ನೊಂದಿಗೆ(JDS) ಬಿಜೆಪಿ ಮೈತ್ರಿ ಮಾಡಿಕೊಳ್ಳುವ ವಿಚಾರ ಕಳೆದ ಕೆಲವು ವಾರಗಳಿಂದ ಭಾರೀ ಚರ್ಚೆಯಾಗುತ್ತಿದೆ. ಆದರೀಗ ಈ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ(Basavaraj bommai)ಅವರು ಈ ಮೈತ್ರಿ ವಿಚಾರವಾಗಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ಹೌದು, 2024ರ ಲೋಕಸಭಾ ಚುನಾವಣೆಯಲ್ಲಿ(Parliament election) ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿ ಒಂದು ಹಂತಕ್ಕೆ ಬಂದಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಮುಂದಾಗುವ ಸಾಧಕ ಮತ್ತು ಬಾಧಕಗಳ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಿಯೇ ಕೊನೆಗೆ ದಳಪತಿಗಳ ಜತೆ ಮೈತ್ರಿಗೆ ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಈ ಮೈತ್ರಿ ವಿಚಾರದ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಹೇಳಿಕೆ ನೀಡಿದ್ದು, ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ(Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ ವಿಚಾರ ನಮ್ಮ ವರಿಷ್ಠರಿಗೆ ಬಿಟ್ಟದ್ದು. ನಮ್ಮ ವರಿಷ್ಠರು ಮತ್ತು ದೇವೇಗೌಡರ(Devegowda) ಜೊತೆಗೆ ಮಾತುಕತೆ ನಡೆದಿದೆ. ಈಗಾಗಲೇ ಹೆಚ್.ಡಿ.ದೇವೇಗೌಡರು ಕೆಲವೊಂದು ಭಾವನೆ ವ್ಯಕ್ತಪಡಿಸಿದ್ದಾರೆ. ಮಾತುಕತೆ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ಆಗುತ್ತದೆ. ಜುಲೈ 18 ರಬಳಿಕ ವಿಪಕ್ಷ ನಾಯಕರ ಘೋಷಣೆ ಆಗುವ ಸಾಧ್ಯತೆ ಇದೆ. ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಊಹಾಪೋಹ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನೂ ವಿಧಾನಮಂಡಲ ಅಧಿವೇಶನದಲ್ಲೂ ಕೂಡ ಎಚ್‌ಡಿ ಕುಮಾರಸ್ವಾಮಿ(HD Kumaraswamy)ಬಿಜೆಪಿಯವರ ನೆರವಿಗೆ ಬಂದಿದ್ದು, ಕುಮಾರಸ್ವಾಮಿ ಅವರ ಮಾತಿಗೆ ಬಿಜೆಪಿ ನಾಯಕರು ಉಘೇ ಉಘೇ ಅನ್ನುತ್ತಿರುವುದು ವಿಶೇಷವಾಗಿತ್ತು. ಅಲ್ಲದೆ ಕಾಂಗ್ರೆಸ್‌ ಸರ್ಕಾರದ ಮೇಲೆ ಬಿಜೆಪಿಯವರಿಗಿಂತ ಹೆಚ್ಚು ಎಚ್‌ಡಿ ಕುಮಾರಸ್ವಾಮಿ ಅವರೇ ವಾಗ್ದಾಳಿ ನಡೆಸುತ್ತಿರುವುದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹತ್ತಿರವಾಗುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಒಕ್ಕಲಿಗರ ಪ್ರಾಬಲ್ಯ ಇರುವ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗೆ ಪ್ಲಸ್‌ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: Shakti yojane: ಶಕ್ತಿ ಯೋಜನೆ ಎಫೆಕ್ಟ್: ಏಕಾಏಕಿ ಹೊಸ ಪ್ಲಾನ್ ಮಾಡಿದ KSRTC !! ಮಹಿಳಾ ಪ್ರಯಾಣಿಕರಿಗೆ ನಿರಾಸೆ !!

Leave A Reply

Your email address will not be published.