Karnataka assembly Opposition Leader: ವಿಪಕ್ಷ ನಾಯಕನ ಹೆಸರು ಪ್ರಕಟಿಸಲು ಕ್ಷಣಗಣನೆ: ಮುಹೂರ್ತ ಕೊನೆಗೂ ಫಿಕ್ಸ್ !
Politicall news Karnataka assembly Countdown to announcement of opposition leader's name
Karnataka assembly Opposition Leader: ಕೊನೆಗೂ ಬಿಜೆಪಿಯಲ್ಲಿ (BJP) ವಿಪಕ್ಷ ನಾಯಕನ(Karnataka assembly Opposition Leader) ಹೆಸರು ಪ್ರಕಟಿಸೋದಕ್ಕೆ ಬಿಜೆಪಿಯಿಂದ ಮುಹೂರ್ತ ಫಿಕ್ಸ್ ಮಾಡಲಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆದ ಬಳಿಕ ಪ್ರತಿಪಕ್ಷ ನಾಯಕನ ಹೆಸರನ್ನು ಪ್ರಕಟಿಸಲು ಬಿಜೆಪಿ ಮುಂದಾಗಿದೆ.
ರಾಜ್ಯ ಬಿಜೆಪಿಯಲ್ಲಿ (BJP Karnataka) ಪ್ರತಿಪಕ್ಷದ ನಾಯಕರಿಲ್ಲದೇ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲಾಗುತ್ತಿದೆ. ಈ ವಿಚಾರದ ಬಗ್ಗೆ ಆಡಳಿತ ಪಕ್ಷ ಕಾಂಗ್ರೆಸ್ ನಾಯಕರು ( Congress Leaders ) ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ವಿಪಕ್ಷ ನಾಯಕನ ಹೆಸರನ್ನು ಪ್ರಕಟಿಸಲು ಬಿಜೆಪಿ ಮುಂದಾಗಿದೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ವಿಪಕ್ಷ ನಾಯಕನ ಸ್ಥಾನ ಜುಲೈ 18 ರ ನಂತರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಎರಡು ದಿನ ಸಭೆ ನಡೆಯಲಿದ್ದು, ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಟ್ಟಾಗುತ್ತಿದೆ. ಈ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಮೋದಿಯವರನ್ನು ಸೋಲಿಸಬೇಕೆಂದು ಪ್ರತಿಪಕ್ಷಗಳ ಮುಖಂಡರು ಒಂದಾಗಿದ್ದಾರೆ. ಆದರೆ ಅದು ಸಾಧ್ಯವಿಲ್ಲದ ಮಾತು. ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ಧಿಷ್ಟವಾದ ಕಾರ್ಯಕ್ರಮವಿಲ್ಲ. ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿಯವರಿಗೆ ಗೌರವ, ಮನ್ನಣೆ ಸಿಗುತ್ತಿದೆ ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಗ್ಯಾರಂಟಿಯ ಬಗ್ಗೆ ಮಾತನಾಡಿದ ಬೊಮ್ಮಾಯಿ, “ಗೃಹಲಕ್ಷ್ಮಿ ಯೋಜನೆ(gruha lakshmi scheme) ಯನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ದಿನಾಂಕ ಮುಂದೆ ಹಾಕಿ ಕೆಲವೇ ಸಮಯದಲ್ಲಿ ಕೆಲವರಿಗೆ ಮಾತ್ರ ಪ್ರಾರಂಭ ಮಾಡುವ ಉದ್ದೇಶ ಸರ್ಕಾರಕ್ಕಿದೆ. ತಾಯಂದಿರಿಗೆ, ರಾಜ್ಯದ ಹೆಣ್ಣುಮಕ್ಕಳಿಗೆ ಭ್ರಮನಿರಸನ ಮಾಡುವಂತಹ ಉದ್ದೇಶ ಈ ಯೋಜನೆ ಹಿಂದಿದೆ. ಅಧಿವೇಶನದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿವೆ” ಎಂದು ಬಸವರಾಜ ಬೊಮ್ಮಾಯಿ ಹೇಳಿದರು.