Krishi pandit Award: ಕೃಷಿ ಪಂಡಿತ ಪ್ರಶಸ್ತಿ : ರೈತರಿಂದ ಅರ್ಜಿ ಆಹ್ವಾನ

Latest Karnataka agriculture news application invitation for krishi pandit award

Krishi pandit Award: ಮಂಗಳೂರು : ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿ(Krishi pandit Award) ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.

ಅರ್ಹ ರೈತರುಗಳು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ 2023ರ ಆಗಸ್ಟ್ 31ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೆಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

Leave A Reply

Your email address will not be published.