Gruha lakshmi Scheme: ಯಜಮಾನಿಯರೇ ಗಮನಿಸಿ- ‘ಗೃಹಲಕ್ಷ್ಮಿ’ ಗೆ ಈ ನಂಬರ್ ನಿಂದ ಮಾತ್ರ ಮೆಸೇಜ್ ಮಾಡಿ, ಅರ್ಜಿ ಸಲ್ಲಿಸ್ಬೇಕು; ಇಲ್ಲಾಂದ್ರೆ ಕೈ ತಪ್ಪುತ್ತೆ 2,000 !!

Latest news congress guarantees How to apply for Gruha lakshmi Scheme 2023

Gruha lakshmi Scheme: ರಾಜ್ಯ ಸರ್ಕಾರ ತನ್ನ ಬಹುನಿರೀಕ್ಷಿತ ಗೃಹಲಕ್ಷ್ಮಿ(Gruha lakshmi Scheme) ಯೋಜನೆಗೆ ಅರ್ಜಿ ಹಾಕಲು ಚಾಲನೆ ನೀಡಿದೆ. ಈಗಾಗಲೇ ಸಾವಿರಾರು ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಅರ್ಜಿ ಸಲ್ಲಿಸಲು ಎರಡು ವಿಧಾನಗಳಿವೆ. ಈ ವಿಧಾನಗಳ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇದಕ್ಕಾಗಿ ನೀವು ಯಾವೆಲ್ಲಾ ದಾಖಲೆಗಳನ್ನು ಹೊಂದಿರಬೇಕು ಎನ್ನುವ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.

ಮೊದಲನೇ ವಿಧಾನ- ಮೊಬೈಲ್ ಮೂಲಕ ಮೆಸೇಜ್ ಮಾಡುವುದು:
ಗೃಹಲಕ್ಷ್ಮಿ ಯೋಜನೆಗೆ ನೀವು ಏಕಾಏಕಿ ಹೋಗಿ ಅರ್ಜಿ ಸಲ್ಲಿಸುವುದಕ್ಕೆ ಸಾಧ್ಯವಿಲ್ಲ. ನೀವು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಪಡಿತರ ಚೀಟಿಯೊಂದಿಗೆ ಲಿಂಕ್‌ ಮಾಡಲಾದ ಮೊಬೈಲ್‌ ನಂಬರ್‌ಗೆ(Mobile number)ನೋಂದಣಿ ವೇಳಾಪಟ್ಟಿಯ ಸಂದೇಶ ಬರಲಿದೆ. ನಿಮ್ಮ ಮೊಬೈಲ್‌ ಸಂಖ್ಯೆಗೆ ಬರುವ ಸಂದೇಶದಲ್ಲಿ ನೀವು ಅರ್ಜಿ ಸಲ್ಲಿಸಬೇಕಾದ ದಿನಾಂಕ, ನಿಮಗೆ ನಿಗದಿಪಡಿಸಿದ ಸ್ಥಳದ ಮಾಹಿತಿ ವಿವರ ಇರಲಿದೆ. ಈ ಸಂದೇಶದಲ್ಲಿ ನಿಮಗೆ ನಿಗದಿಪಡಿಸಿರುವ ದಿನಾಂಕದಂದು ಹೋಗಿ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.

ರೇಷನ್‌ ಕಾರ್ಡ್‌ಗೆ ಲಿಂಕ್‌ ಮಾಡಲಾದ ಮೊಬೈಲ್‌ ನಂಬರ್‌ ನಿಮ್ಮ ಬಳಿ ಇಲ್ಲದಿದ್ದರೆ ಏನು ಮಾಡೋದು?
• ಮೊದಲಿಗೆ ಕುಟುಂಬದ ಮುಖ್ಯಸ್ಥರಾಗಿದ್ದು ಆಧಾರ್ ಕಾರ್ಡ್ ಅಲ್ಲಿ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ 8147500500 ಈ ಮೊಬೈಲ್ ಸಂಖ್ಯೆಗೆ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು SMS ಮೂಲಕ ಕಳುಹಿಸಬೇಕು.
• SMS ಕಳುಹಿಸಿದ ಕೆಲವೇ ಕ್ಷಣಗಳಲ್ಲಿ ನಿಮಗೆ VM-SEVSIN ಕರ್ನಾಟಕ ಸರ್ಕಾರದ ವತಿಯಿಂದ ನೀವು ಯಾವ ದಿನಾಂಕದಲ್ಲಿ ಯಾವ ಸಮಯಕ್ಕೆ ಯಾವ ಸ್ಥಳದಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂಬ ಮೆಸೇಜ್ ಬರುತ್ತದೆ.
• ಒಂದು ವೇಳೆ ಮೆಸೇಜ್ ಬಾರದಿದ್ದರೆ ಅದು ಸರ್ವರ್ ಸಮಸ್ಯೆ ಆಗಿರುತ್ತದೆ, ಆದ್ದರಿಂದ ಮತ್ತೆ ನೀವು ಸಂದೇಶ ಕಳುಹಿಸಬೇಕು.
• ಮರಳಿ ಬಂದ SMS ನಲ್ಲಿ ಯಾವ ಗ್ರಾಮದಲ್ಲಿ ಯಾವ ಕೇಂದ್ರದಲ್ಲಿ ಯಾವ ಸಮಯಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿ ಬರುತ್ತದೆ.

ಎಲ್ಲೆಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ?
• ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಹೋಗಬೇಕು.
• ನಗರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಕರ್ನಾಟಕ ಒನ್, ವಾರ್ಡ ಕಛೇರಿ, ಸ್ಥಳಿಯ ನಗರಾಡಳಿತ ಸಂಸ್ಥೆಯ ಕಛೇರಿ, ಗೃಹಲಕ್ಷ್ಮೀ ನೋಂದಣಿ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಎರಡನೇ ವಿಧಾನ- ಪ್ರಜಾ ಪ್ರತಿನಿಧಿಗಳು:
“ಪ್ರಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು) ಫಲಾನುಭವಿಗಳ ಮನೆಗೆ ಭೇಟಿ ನೀಡಲಿದ್ದು, ಅವರಿಂದಲೂ ಸಹ ಸ್ಥಳದಲ್ಲಿಯೇ ನೊಂದಾಯಿಸಿ ಕೊಳ್ಳಬಹುದು. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೆ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ.

ನೀವು ಬೇರೆ ಜಿಲ್ಲೆಯಲ್ಲಿದ್ದು? ನಿಮ್ಮ ರೇಷನ್‌ ಕಾರ್ಡ್‌ ವಿಳಾಸ ಅಪ್ಡೇಟ್‌ ಮಾಡಿಲ್ಲದಿದ್ದರೆ ಅರ್ಜಿ ಸಲ್ಲಿಸಬಹುದೇ?
ನೀವು ಯಾವುದೇ ಜಿಲ್ಲೆಯಲ್ಲಿ ವಾಸವಿದ್ದರೂ ಕೂಡ ನಿಮ್ಮ ರೇಷನ್‌ ಕಾರ್ಡ್‌ ವಿಳಾಸಕ್ಕೆ ಸಮೀಪವಿರುವ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಒಂದು ವೇಳೆ ನೀವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸಬೇಕು ಅಂದರೆ ಮೊದಲು ನಿಮ್ಮ ರೇಷನ್‌ ಕಾರ್ಡ್‌ ವಿಳಾಸವನ್ನು ಅಪ್ಡೇಟ್‌ ಮಾಡಿಸಿಕೊಂಡು ನಂತರ ಅರ್ಜಿ ಸಲ್ಲಿಸುವುದಕ್ಕೆ ಸಾದ್ಯವಾಗಲಿದೆ.

 

ಇದನ್ನು ಓದಿ: Dharmasthala Sowjanya Story: ಸಿನಿಮಾ ಆಗಿ ಮತ್ತೆ ಬರಲಿದ್ದಾಳೆ ಸೌಜನ್ಯ: ಭಾರೀ ಕುತೂಹಲ ಕೆರಳಿಸಿದೆ ಸಿನಿಮಾ ಟೈಟಲ್ !! 

Leave A Reply

Your email address will not be published.