Siddaramaiah: ಮತದಾರರಿಗೆ ಆಮಿಷ ತೋರಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ?! ರಾಜ್ಯ ರಾಜಕೀಯದಲ್ಲಿ ಸಂಚಲನ !

latest news KM Shankar has moved the High Court annulment of CM Siddaramaiah MLA seat

Siddaramaiah: ರಾಜ್ಯದಲ್ಲಿ ಕಾಂಗ್ರೆಸ್ (congress) ಅಧಿಕಾರದ ಚುಕ್ಕಾಣಿ ಹಿಡಿದಿದೆ. ಐದು ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ (Siddaramaiah) ಸರ್ಕಾರ ಕೆಲವು ಗ್ಯಾರಂಟಿಗಳನ್ನು ಜಾರಿಗೆ ತಂದು ಘೋಷಣೆ ಮಾಡಿದೆ. ಕಾಂಗ್ರೆಸ್ ಚುನಾವಣೆ ಹೊತ್ತಲ್ಲಿ, ಗೃಹಜ್ಯೋತಿ 200 ಯೂನಿಟ್ ಉಚಿತ ವಿದ್ಯುತ್, ಪ್ರತೀ ಮನೆಗೆ ಗೃಹಲಕ್ಷ್ಮೀಯರಿಗೆ 2000, ಅನ್ನಭಾಗ್ಯ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ, ಯುವನಿಧಿ ನಿರುದ್ಯೋಗ ಭತ್ಯೆ 3 ಸಾವಿರ ಪದವೀಧರರಿಗೆ, 1,500 ಡಿಪ್ಲೊಮಾ ಪದವೀಧರರಿಗೆ, ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ (ಶಕ್ತಿ ಯೋಜನೆ) ಎಂಬ ಐದು ಗ್ಯಾರಂಟಿ (Congress 5 guarantee) ಘೋಷಿಸಿದೆ. ಕೆಲವು ಅನುಷ್ಟಾನವೂ ಆಗಿದೆ. ಜನರು ಅದರ ಪ್ರಯೋಜನ ಪಡೆಯುತ್ತಿದ್ದಾರೆ.

 

ಆದರೆ, ಈ ಮಧ್ಯೆ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೌದು, ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು (Congress Guarantee Card) ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ (Karnataka High Court) ಮೆಟ್ಟಿಲೇರಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ
ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಹೈಕೋರ್ಟ್ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.

ಚುನಾವಣೆ ಸಂದರ್ಭದಲ್ಲಿ ರಾಜ್ಯಾದ್ಯಂತ ಹಂಚಿರುವ ಗ್ಯಾರಂಟಿ ಕಾರ್ಡ್, ಗ್ಯಾರಂಟಿ ಯೋಜನೆಗಳು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಶಾಸಕ ಸ್ಥಾನಕ್ಕೆ ಕುತ್ತಾಗುತ್ತಾ ?!ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ ಉಲ್ಲಂಘನೆಯಾಗಿದೆಯಾ ?! ಈ ಬಗ್ಗೆ ಜುಲೈ 28ಕ್ಕೆ ತಿಳಿಯಲಿದೆ.

 

ಇದನ್ನು ಓದಿ: Manipur Violence: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ : ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಹೇಳಿದ್ದೇನು ?! 

Leave A Reply

Your email address will not be published.