NIT Karnataka Recruitment 2023: ಸುರತ್ಕಲ್ ನಲ್ಲಿ ಉದ್ಯೋಗವಕಾಶ ; ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಿ – ಜುಲೈ 31 ಕೊನೆಯ ದಿನ !
Latest news job news NIT Karnataka Recruitment 2023 notification
NIT Karnataka Recruitment 2023: ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ ಒಂದು ಇಲ್ಲಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ(NIT Karnataka Recruitment 2023) ಆಹ್ವಾನಿಸಿದೆ. ಉದ್ಯೋಗ (Job) ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಯ ಹೆಸರು: ಫೀಲ್ಡ್ ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಸುರತ್ಕಲ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 31, 2023
ವೇತನ: ಮಾಸಿಕ ₹ 15,000
ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಜುಲೈ 1, 2023ಕ್ಕೆ ಗರಿಷ್ಠ 37 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು: ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 17/07/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಜುಲೈ 31, 2023
ವಿದ್ಯಾರ್ಹತೆ: NIT ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಬಿ.ಎಸ್ಸಿ, ಅಗ್ರಿಕಲ್ಚರ್ ಎಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಅನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ nikhilks@nitk.edu.in ಇ-ಮೇಲ್ ಐಡಿಗೆ ಕಳುಹಿಸಬೇಕು. ಅಥವಾ ಈ ಕೆಳಕಂಡ ವಿಳಾಸಕ್ಕೆ ಜುಲೈ 31 ರೊಳಗೆ ಆಸಕ್ತ ಅಭ್ಯರ್ಥಿಗಳು ಕಳುಹಿಸಬೇಕು.
ಡಾ. ನಿಖಿಲ್ ಕೆ. ಎಸ್.
ಪ್ರಧಾನ ತನಿಖಾಧಿಕಾರಿ ಮತ್ತು ಸಹಾಯಕ ಪ್ರಾಧ್ಯಾಪಕರು
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ
NITK ಸುರತ್ಕಲ್
ಮಂಗಳೂರು-575025
ಭಾರತ
ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ನಂಬರ್ +919444640017 ಗೆ ಕರೆ ಮಾಡಿ.