Nandini Milk: ನಂದಿನಿ ಹಾಲಿನ ದರ 3 ರೂ. ಹೆಚ್ಚಳ ! ಇದೇ ದಿನಾಂಕದಿಂದ ಜಾರಿ
latest news Nandini Milk price hike Nandini milk price is Rs.3. increase
Nandini Milk price hike: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ (Nandini Milk price hike) ಮಾಡುವ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಇದೀಗ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಕೊಂಡಿದ್ದೂ, ಈ ಹೊಸ ದರವು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ(CM Siddaramaiah) ನೇತೃತ್ವದಲ್ಲಿ ಏರ್ಪಡಿಸಿದ್ದ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ (KMF) ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. KMF ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವ ಸಲ್ಲಿಸಿತ್ತು. ಕೊನೆಗೆ ಸರ್ಕಾರ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹೆಚ್.ಡಿ.ರೇವಣ್ಣ (H D Revanna) , 5 ರೂ. ದರ ಏರಿಕೆಗೆ ಪ್ರಸ್ತಾಪವಿತ್ತು. 3 ರೂ. ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ನೀಡಿದ್ದಾರೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ದರ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದ್ದಾರೆ.