ಉಡುಪಿಯ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಣೆ !
Holiday :ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಈ ಕೆಳಗಿನ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ನಾಳೆ, ಸೋಮವಾರ, ಜು.24 ರಂದು ರಜೆ (Holiday )ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಸದ್ಯ ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ. ಬಹುತೇಕ ಹಳ್ಳ ಒಳ್ಳಗಳು ನೆರೆ ಮಟ್ಟದಲ್ಲಿ ಹರಿಯುತ್ತಿವೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ನೆರೆ ಪರಿಸ್ಥಿತಿ ಮತ್ತು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಮಕ್ಕಳ ಸುರಕ್ಷತೆಯ ಕಾರಣ ಉಡುಪಿ ಜಿಲ್ಲೆಯಲ್ಲಿ ಮಕ್ಕಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ : ನಾಳೆ ಜುಲೈ 24 ರಂದು ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ಬೆಳಗಾವಿಯ ಈ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ