ನಾಳೆ ಜುಲೈ 24 ರಂದು ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ಬೆಳಗಾವಿಯ ಈ ತಾಲೂಕುಗಳಿಗೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
Holiday: ಉತ್ತರ ಕನ್ನಡ ಜಿಲ್ಲೆಗೆ ರಜೆ:
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮತ್ತು ನಿರಂತರ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಅಲ್ಲನ ಜಿಲ್ಲಾಡಳಿತವು ನಾಳೆ, ಸೋಮವಾರ ಜುಲೈ 24 ರಂದು ಉ.ಕ.ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ , ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ (Holiday)ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹಾಗಾಗಿ ಅಲ್ಲಿನ ಎಲ್ಲಾ ಸೋಮವಾರ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಇರಲಿದೆ. ಕಾಳಿ ನದಿಯ ಕದ್ರಾ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರು ಬಿಡುವ ಸಾಧ್ಯತೆ ಕೂಡಾ ಇದೆ. ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮುಂಜಾಗ್ರತೆಯಿಂದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಗೆ ರಜೆ:
ಇನ್ನೊಂದೆಡೆ, ಭರಪೂರ ವರ್ಷ ಘೋಷದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ನಾಳೆ ಸೋಮವಾರ, ಜುಲೈ 24 ರಂದು ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾರವರು ರಜೆ ಘೋಷಿಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿನ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.
ಬೆಳಗಾವಿ ಜಿಲ್ಲೆಯ ಈ ತಾಲೂಕುಗಳಲ್ಲಿ ರಜೆ:
ಮತ್ತೊಂದೆಡೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ. ಅಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ ಜುಲೈ 24 ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಹಾಸನದ ಈ ತಾಲೂಕುಗಳಲ್ಲಿ ರಜೆ:
ಮಲೆನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಸಕಲೇಶಪುರ, ಬೇಲೂರು ಆಲೂರು ಹಾಗೂ ಅರಕಲಗೂಡು ತಾಲೂಕಿನ ಎಲ್ಲಾ ಅಂಗನವಾಡಿ,ಸರ್ಕಾರಿ, ಅನುದಾನಿತ ಹಾಗೂ ಖಾಸಗಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ:
ವಿಪರೀತ ವಲಯ ಕಾರಣ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ:
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ : ಧರ್ಮಸ್ಥಳ ಸೌಜನ್ಯ ಗೌಡ ಹತ್ಯೆ ಪ್ರಕರಣ ಇದು ಅಂತಾರಾಷ್ಟ್ರೀಯ ನರಮೇಧ ಪ್ರಕರಣ – ಅಂಬೇಡ್ಕರ್ ಯುವಸೇನೆ, ಉಡುಪಿಯಿಂದ ಪ್ರತಿಭಟನೆ !