Gruhalakshmi Scheme: ‘ಗೃಹಲಕ್ಷ್ಮೀ’ಗೆ ಅರ್ಜಿ ಸಲ್ಲಿಸೋ ಕೊನೇ ಕ್ಷಣದಲ್ಲಿ ಹೊಸ ಟ್ವಿಸ್ಟ್ ಇಟ್ಟ ಸರ್ಕಾರ – ಹಣ ಗಳಿಕೆಯ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ !!
Latest Karnataka news Congress guarantee Gruhalakshmi scheme big shock to those who collect money for submission of application
Gruhalakshmi Scheme: ಮನೆ ಯಜಮಾನಿಗೆ 2000 ರೂಪಾಯಿ ನೆರವು ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ(Gruhalakshmi Scheme) ಗುರುವಾದಿಂದ ನೋಂದಣಿ ಆರಂಭವಾಗಿದೆ. ಈಗಾಗಲೇ ಲಕ್ಷಾಂತರ ಮಂದಿ ನೊಂದಾವಣಿ ಮಾಡಿಕೊಂಡಿದ್ದಾರೆ. ಆದರೆ ಈ ನಡುವೆ ನೊಂದಾವಣಿ ಮಾಡುವ ಗ್ರಾಮ ಒನ್ ಸಿಬ್ಬಂದಿಗೆ ಸರ್ಕಾರ ಶಾಕ್ ನೀಡಿದೆ.
ಹೌದು, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅನೇಕ ಕಡೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಸಾರ್ವಜನಿಕರಿಂದ ವ್ಯಾಪಕ ದೂರು ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಕ್ರಮ ಕೈಗೊಂಡಿದ್ದು, ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೆ ಅವರ ಲಾಗಿನ್ ID ಯನ್ನು ಕೂಡ ರದ್ಧುಮಾಡಲು ಸರ್ಕಾರ ಆದೇಶ ನೀಡಿದೆ. ಈ ಮೂಲಕ ಗೃಹಲಕ್ಷ್ಮೀಗೆ ಅರ್ಜಿ ಹಾಕುವ ಮೂಲಕ ಹಣ ಗಳಿಸೋಣ ಎಂದುಕೊಂಡವರಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.
ಅಂದಹಾಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಶಿಬರೂರು ಗ್ರಾಮ ಒನ್ ಕೇಂದ್ರದ ಸಿಬ್ಬಂದಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಶಿಬರೂರು ಗ್ರಾಮದಲ್ಲಿ ಅರ್ಜಿ ಸಲ್ಲಿಸುವಾಗ 50 ರಿಂದ 100 ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ. ಈ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಅಂತ ಅವರು ತಮ್ಮ ಫೇಸ್ ಬುಕ್‌ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಇವೆಲ್ಲದರ ನಡುವೆ ಮಹಿಳೆಯರು ಅರ್ಜಿ ಸಲ್ಲಿಸುವಲ್ಲಿ ಯಶಸ್ವಿಯಾದರು. ನಿನ್ನೆ ಒಂದೇ ದಿನ 1416462 ಮಂದಿ ಅರ್ಜಿ ಸಲ್ಲಿಸಿದ್ದು, ಇಲ್ಲಿ ತನ ಒಟ್ಟು 2290782 ಮಂದಿ ಅರ್ಜಿ ಸಲ್ಲಿಸಿದ್ದಾರೆ ಅಂತ ತಿಳಿದು ಬಂದಿದೆ. ಇನ್ನೂ ಇಂದು ಭಾನುವಾರ ಆದರೂ ಕೂಡ ‘ಗೃಹಲಕ್ಷ್ಮಿ’ ಯೋಜನೆಯನ್ನು ಇಂದು ನೋಂದಣಿ ಕೇಂದ್ರಗಳಲ್ಲಿ ನೋಂದಣಿ ನಡೆಯಲಿದೆ ಎನ್ನಲಾಗಿದೆ.