GruhaLakshmi Scheme: ‘ಗೃಹಲಕ್ಷ್ಮೀ’ ಮಹಿಳೆಯರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ – ಈ ‘ಯಜಮಾನಿ’ಯರಿಗೆ ಹಣವಿಲ್ಲ ಎಂದ ಸಚಿವ !!

Latest Karnataka news Congress guarantee They are not eligible for Gruha Lakshmi Yojana says Minister B. Nagendra

GruhaLakshmi Scheme: ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರಕಾರವು ‘ಗೃಹಲಕ್ಷ್ಮಿ’ ಯೋಜನೆ ಆರಂಭಿಸಿದೆ. ಬಹು ನಿರೀಕ್ಷಿತ ಹಾಗೂ ಕಾತುರದಿಂದ ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಗೆ (GruhaLakshmi Scheme) ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಆದರೆ, ಈ ಮಧ್ಯೆ ಗೃಹಲಕ್ಷ್ಮೀ’ ಮಹಿಳೆಯರಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಈ ‘ಯಜಮಾನಿ’ಯರಿಗೆ ಹಣವಿಲ್ಲ ಎಂದು ಯುವಜನ ಸೇವೆ, ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದ್ದಾರೆ.

ಶನಿವಾರದಂದು ನಗರದ ಎಸ್.ಪಿ ವೃತ್ತದ ಬಳಿಯಿರುವ ಸ್ತ್ರೀ ಸೇವಾ ನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಗೃಹಲಕ್ಷ್ಮೀ ಯೋಜನೆಯ ಕುರಿತು ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿ.ನಾಗೇಂದ್ರ ಅವರು, ಸರ್ಕಾರದ ಐದು ಗ್ಯಾರಂಟಿ ಯೋಜನಗಳಲ್ಲಿ ಈಗಾಗಲೇ ಮೂರು ಯೋಜನೆಗಳು ಜಾರಿಗೊಂಡಿದೆ. ಇದರಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಮಹಿಳಾ ಯಜಮಾನಿಯ ಕುಟುಂಬದ ಹೊರೆ ಕಡಿಮೆ ಮಾಡಲು ಸಹಕಾರಿಯಾಗಿದೆ ಎಂದು ಹೇಳಿದರು.

ಆದರೆ, ಈ ಯೋಜನೆಯ ಲಾಭ ಪಡೆಯಲು ಕೆಲವು ಯಜಮಾನಿಯರು ಅರ್ಹರಲ್ಲ ಎಂದು ಹೇಳಿದರು.
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವಿತರಿಸುವ ಬಿ.ಪಿ.ಎಲ್, ಎ.ಪಿ.ಎಲ್, ಅಂತ್ಯೋದಯ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಗೆ ಫಲಾನುಭವಿಗಳಾಗಿರುತ್ತಾರೆ. ಆದರೆ, ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಈ ಯೋಜನೆಗೆ ಅರ್ಹರಾಗುವುದಿಲ್ಲ. ಯಜಮಾನಿ ಅಥವಾ ಯಜಮಾನಿಯ ಪತಿ ಜಿ.ಎಸ್.ಟಿ ರಿಟನ್ಸ್ ಸಲ್ಲಿಸುವರಾಗಿದ್ದರೆ ಈ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದು ತಿಳಿಸಿದರು.

ಕುಟುಂಬದ ಯಜಮಾನಿಯ ಪಡಿತರ ಚೀಟಿ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಯಜಮಾನಿಯ ಆಧಾರ್ ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಪಾಸ್ ಬುಕ್ ಅಥವಾ ಫಲಾನುಭವಿಯು ಇಚ್ಚಿಸಿರುವ ಪರ್ಯಾಯ ಬ್ಯಾಂಕ್‌ ಖಾತೆ ವಿವರ ಮಾಹಿತಿ ಅಗತ್ಯವಿದೆ.

ಗೃಹಲಕ್ಷ್ಮಿ ಯೋಜನೆಗೆ ಗ್ರಾಮ ಒನ್, ಕರ್ನಾಟಕ ಒನ್‌, ಬೆಂಗಳೂರು ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ನಿಮ್ಮ ಹತ್ತಿರದಲ್ಲಿರುವ ಈ ಯಾವುದಾದರೂ ಒಂದು ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಸಹಾಯವಾಣಿ:
ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಏನಾದರೂ ಗೊಂದಲಗಳು ಇದ್ದರೆ ಹೆಲ್ಪ್ ಲೈನ್ ಸಂಖ್ಯೆ – 1902ಕ್ಕೆ ಕರೆ ಮಾಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅಲ್ಲದೆ ಈ ಸಂಬಂಧ ಯಾವುದೇ ಮಾಹಿತಿಯನ್ನಾದರೂ ಕೇಳಿ ಪಡೆದುಕೊಳ್ಳಲು ಹಾಗೂ ವಂಚನೆ ಪ್ರಕರಣಕ್ಕೆ ಕಡಿವಾಣ ಹಾಕಲು ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಈ ಸಂಖ್ಯೆ ಎಸ್‌ಎಂಎಸ್ ಮಾಡಬಹುದು.

ಇದನ್ನೂ ಓದಿ: Mysuru : ಸ್ಪುರದ್ರೂಪಿ ಗೆಳತಿ ಇದ್ರೂ ಬೇರೊಬ್ಬಳ ಜತೆ ಅನನ್ಯ ತಿರುಗಾಟ ! ನೊಂದ ಹುಡುಗಿ ಹುಡುಕಿದ್ದು ಇಲಿ ಪಾಷಾಣ !

Leave A Reply

Your email address will not be published.