Puttur: ಪುತ್ತೂರು ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ
Latest Dakshina kannada news There is no holiday for schools and colleges in Puttur taluk


Puttur : ಪುತ್ತೂರು (Puttur) ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಸ್ಪಷ್ಟಪಡಿಸಿದ್ದಾರೆ.
ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಈ ಸ್ಪಷ್ಟನೆ ನೀಡಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಲಹೆಯಂತೆ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅನಿವಾರ್ಯತೆ ಇಲ್ಲ ಎನ್ನುವುದನ್ನು ತಾಲೂಕು ಆಡಳಿತ ಮಂಡಳಿ ನಿರ್ಧರಿಸಿದೆ.